ಬೆಂಗಳೂರು: ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್ ಮತ್ತು ಡಿಪ್ಲೊಮೋ ತರಗತಿಗಳ ಎಲ್ಲ ವರ್ಷಗಳ ವಿದ್ಯಾರ್ಥಿಗಳಿಗೆ ಆಫ್ಲೈನ್ ತರಗತಿಗಳನ್ನು ಇದೇ 15ರಿಂದ ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರಕಟಿಸಿದರು. ಈ ಸಂಬಂಧ ಬೆಂಗಳೂರಿನಲ್ಲಿ ಸೋಮವಾರ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ಡಿಸಿಎಂ ಅವರು, ಅಂತಿಮ...
ಬೆಂಗಳೂರು: ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಜೂನ್ ಮೊದಲ ವಾರದಿಂದ ಪ್ರಾರಂಭವಾಗಲಿವೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಶಿಕ್ಷಣ ಇಲಾಖೆಯು ಈ ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರ್ತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಿದ್ದು, ಇದರ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುತ್ತದೆ. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ...
ಕೋಲಾರ: ರಾಮನಗರದ ಕಪಾಲಿ ಬೆಟ್ಟವನ್ನ ಕ್ರೈಸ್ತ ಮಿಷನರಿಗಳು ಕಬಳಿಸಿದ್ದಾರೆ ಅನ್ನೋ ಆರೋಪ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇದೀಗ ಕೋಲಾರದ ದಕ್ಷಿಣಗಿರಿ ಬೆಟ್ಟದಲ್ಲಿರೋ ಏಸು ಶಿಲುಬೆ, ಚರ್ಚ್ ಹಲವು ವರ್ಷಗಳ ಬಳಿಕ ವಿವಾದಕ್ಕೆ ಕಾರಣವಾಗಿದೆ. ಆ ಜಾಗದಲ್ಲಿ ಸರ್ಕಾರಿ ಜಾಗ ಒತ್ತುವರಿ, ಮತಾಂತರ ನಡೆಯುತ್ತಿದೆ ಅನ್ನೋ ಆರೋಪ ಹಿಂದುಪರ ಸಂಘಟನೆಗಳಿಂದ ಕೇಳಿ ಬಂದಿದೆ....
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಉದ್ಘಾಟಿಸಲಿದ್ದಾರೆ. ಜೂತೆಗೆ ಐವರು ಕೊರೊನಾ ವಾರಿಯರ್ಸ್ ಗಳನ್ನು ದಸರಾ ಉದ್ಘಾಟನೆ ವೇಳೆ ಸನ್ಮಾನಿಸಲಾಗುವುದು ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. ಮೈಸೂರಿನಲ್ಲಿಂದು ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್, ದಸರಾ ಉದ್ಘಾಟನೆ ಮತ್ತು ಜಂಬೂ ಸವಾರಿ ವೇಳೆ ಎಷ್ಟು ಜನರು...
ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ. ಒಂದ್ಕಡೆ ಜಂಬೂ ಸವಾರಿ ಮೆರವಣಿಗೆಯ ವೇಳೆ ಕುಶಾಲ ತೋಪು ಸಿಡಿಸುವ ಪಿರಂಗಿಗಳನ್ನು ಸನ್ನಧ್ಧಗೊಳಿಸುವ ಕಾರ್ಯ ಆರಂಭಿಸಲಾಗಿದೆ. ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ಹಾಕುವ ಗಾದಿ ಸೇರಿದಂತೆ ಹಲವು ವಸ್ತುಗಳನ್ನು ಸಿದ್ಧಗೊಳಿಸಲಾಗಿದೆ. ಮತ್ತೊಂದ್ಕಡೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ಆಗಮನಕ್ಕೆ ಸಾಂಸ್ಕ್ರತಿಕ ನಗರಿ...
ಬೆಂಗಳೂರು: ಅತಿವೃಷ್ಟಿ ಕುರಿತು ಕೇಂದ್ರ ಸರ್ಕಾರ ರಾಜ್ಯದಿಂದ ಮಾಹಿತಿ ಪಡೆದಿದೆ. ಆದ್ರೆ, ಕಳೆದ ಬಾರಿಯ ಪರಿಹಾರವನ್ನೆ ಇನ್ನೂ ನೀಡಿಲ್ಲ ಈ ವರ್ಷದ ಪರಿಹಾರ ಯಾವಾಗ ನೀಡ್ತಾರೆ ಅನ್ನೋ ಅನುಮಾನಗಳು ವ್ಯಕ್ತವಾಗಿವೆ. ಈ ಕುರಿತು ಟ್ವೀಟ್ ಮಾಡಿರೋ ವಿಪಕ್ಷ ನಾಯಕ ಸಿದ್ದರಾಮಯ್ಯ, ಅತಿವೃಷ್ಟಿ ಬಗ್ಗೆ ಪ್ರಧಾನಿ ಮೋದಿ ರಾಜ್ಯ ಸಚಿವರ ಸಭೆ ನಡೆಸುತ್ತಿರುವುದು ಸ್ವಾಗತಾರ್ಹ. ಕಳೆದ...
ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾದ ನಷ್ಟಗಳ ಕುರಿತು ರಾಜ್ಯ ಸರ್ಕಾರ ಪ್ರಧಾನಿ ಮೋದಿಗೆ ಮಾಹಿತಿ ನೀಡಿದೆ. ಪ್ರಾಥಮಿಕ ಹಂತವಾಗಿ 4 ಸಾವಿರ ಕೋಟಿ ಪರಿಹಾರ ನೀಡುವಂತೆ ಮನವಿ ಮಾಡಿದೆ. ಅಲ್ಲದೆ, ಕೇಂದ್ರ ಸರ್ಕಾರದ ಮುಂದೆ ರಾಜ್ಯ ಸರ್ಕಾರ ಐದು ಬೇಡಿಕೆಗಳನ್ನು ಇಟ್ಟಿದೆ. ರಾಜ್ಯದಲ್ಲಿ ಅತಿವೃಷ್ಟಿಯಿಂದ ಜನ ತತ್ತರಿಸಿ ಹೋಗಿದ್ದಾರೆ. ಕಳೆದ ವರ್ಷದ ಪ್ರವಾಹದಿಂದ ಚೇತರಿಸಿಕೊಳ್ಳದ ಜನರು ಈ...
ಬೆಂಗಳೂರು: ಕೊರೋನಾದಿಂದ ದೇವರೇ ಕಾಪಾಡಬೇಕು ಅನ್ನೋ ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿಕೆಗೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. ಪರಿಸ್ಥಿತಿ ನಿಭಾಯಿಸೋಕೆ ಆಗಲ್ಲ ಅಂದ್ರೆ ಅಧಿಕಾರದಲ್ಲಿ ಯಾಕಿದೀರಾ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಅಧಿಕಾರಕ್ಕಾಗಿ ಬಿಜೆಪಿಯವರು ಏನೇನೋ ಮಾಡಿದ್ರು. ಈಗ ನಮ್ಮ ಕೈಲಿ ಆಗಲ್ಲ ಅಂತಾರೆ. ಪರಿಸ್ಥಿತಿ ನಿಭಾಯಿಸೋಕೆ...
ಬೆಂಗಳೂರು: ಕೋವಿಡ್ 19 ನಿಯಂತ್ರಿಸುವ ಸಲುವಾಗಿ ರಾಜ್ಯ ಸರ್ಕಾರ ಮತ್ತೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಒಂದು ವಾರ ಲಾಕ್ ಡೌನ್ ಜಾರಿಗೊಳಿಸಿದ್ದು ವಿನಾಕಾರಣ ವಾಹನ ಸವಾರರು ರಸ್ತೆಗಿಳಿದಿದ್ದು ಇದನ್ನು ನಿಯಂತ್ರಿಸುವ ಸಲುವಾಗಿ ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ ವಿನಾಕಾರಣ ರಸ್ತೆಗಿಳಿದ ವಾಹನ ಸವಾರರಿಗೆ ಖಡಕ್ ವಾರ್ನಿಂಗ್ ನೀಡುವ ಮೂಲಕ ಲಾಕ್...
ಯಾದಗಿರಿ: ಇಂದು ಬೆಳಿಗ್ಗೆಯಿಂದ ಜಿಲ್ಲಾದ್ಯಂತ ರಣಭೀಕರವಾಗಿ ಮಳೆಯಾಗುತ್ತಿದ್ದು ನೂರಾರು ಎಕರೆ ಪ್ರದೇಶದಲ್ಲಿ ಬಿತ್ತನೆ ಮಾಡಿದ ಬೆಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ಚಾಮನಾಳ ಗ್ರಾಮದಲ್ಲಿ 25 ಎಕರೆ ಭತ್ತ ನಾಟಿ ಮಾಡಿದ ಜಮೀನಲ್ಲಿ ಮಳೆನೀರು ನುಗ್ಗಿ ಕೊಚ್ಚಿಕೊಂಡು ಹೋಗಿ ಅನ್ನದಾತನು ಕಣ್ಣೀರು ಹಾಕುವಂತಾಗಿದೆ. ಜಿಲ್ಲೆಯಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದ ಯಾವ ರಸ್ತೆಯಲ್ಲಿ ನೋಡಿದ್ರು ಮಳೆ ನೀರು ಆವರಿಸುವ...