ಕ್ರಿಕೆಟ್ ಆಡಿ ಗಮನ ಸೆಳೆದ ಮೈಸೂರು ಡಿಸಿ ರೋಹಿಣಿ ಸಿಂಧೂರಿ

0
2

ಮೈಸೂರು: ಇತ್ತೀಚೆಗಷ್ಟೇ ಕಾರಿನ ಟೈಯರ್ ಬದಲಿಸಿ ಗಮನ ಸೆಳೆದಿದ್ದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಇದೀಗ ಕ್ರಿಕೆಟ್ ಆಟವಾಡಿ ಮತ್ತೊಮ್ಮೆ ಗಮನ ಸೆಳೆದಿದ್ದಾರೆ

ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ ಹಾಗೂ ರಾಜ್ಯ ಎನ್.ಟಿ.ಇ.ಪಿ ನೌಕರರ ಸಹಯೋಗದಲ್ಲಿ ಗುರುವಾರ ಕ್ಷಯರೋಗದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಜೆ.ಕೆ.ಮೈದಾನದಲ್ಲಿ ಏರ್ಪಡಿಸಿದ್ದ ಕ್ರಿಕೆಟ್ ಟೂರ್ನಿಮೆಂಟ್‌ಅನ್ನು ಉದ್ಘಾಟಿಸಿ ಮಾತನಾಡಿದ ಮೈಸೂರು ಡಿಸಿ ಪ್ರಸ್ತುತ ದಿನಗಳಲ್ಲಿ ಕೊರೋನ ಹೆಚ್ಚಾಗಿ ಕಾಣಿಸುತ್ತಿದ್ದರೂ, ಕೊರೋನಾಗಿಂತ ಹೆಚ್ಚು ಅಪಾಯಕಾರಿಯಾದದ್ದು ಕ್ಷಯರೋಗ ಎಂದು ಹೇಳಿದರು.

ಮಾರ್ಚ್ 24 ರಂದು ವಿಶ್ವ ಕ್ಷಯರೋಗ ದಿನವಾಗಿದ್ದು, ಇದರ ಬಗ್ಗೆ ಅರಿವು ಮೂಡಿಸಲು 8 ಜಿಲ್ಲೆಗಳಿಂದ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಆಗಮಿಸಿದ್ದಾರೆ. ಅರಿವು ಮೂಡಿಸುವ ಕಾರ್ಯಕ್ರಮವು 4 ವರ್ಷಗಳಿಂದ ನಡೆಯುತ್ತಿದ್ದು, 3 ದಿನಗಳ ಈ ಟೂರ್ನಿಮೆಂಟ್ ನಡೆಯುವ ಮೂಲಕ ಅರಿವು ಮೂಡಿಸಲಿದ್ದಾರೆ ಎಂದರು.

ಮೈಸೂರಲ್ಲಿ ಸ್ವಚ್ಛ ಸರ್ವೇಕ್ಷಣ್ ಅಭಿಯಾನ ನಡೆಯುತ್ತಿದ್ದು, ಮೈಸೂರನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಹಿಂದೆಯೂ ಹಲವಾರು ಪ್ರಯತ್ನಗಳು ನಡೆದಿದೆ. ಆದರೆ ಕೊರೋನಾದಿಂದಾಗಿ ಸ್ವಚ್ಛ ಸರ್ವೇಕ್ಷಣಾ ಅಭಿಯಾನದಲ್ಲಿ ಹಿಂದೆ(ಲ್ಯಾಗ್) ಉಳಿದಿದ್ದೇವೆ. ಇದರಿಂದ ಮತ್ತೆ ಪ್ಲಾಸ್ಟಿಕ್ ಬಳಕೆ ಹೆಚ್ಚಾಗಿದ್ದು, ಕೊರೊನಾದಿಂದ ಸಾಕಷ್ಟು ನಷ್ಟವುಂಟಾಗಿದೆ ಎಂದು ತಿಳಿಸಿದರು.

ಪ್ಲಾಸ್ಟಿಕ್ ಬಳಸುವವರಿಗೆ ಏಪ್ರಿಲ್ 5ರೊಳಗಾಗಿ ಅರಿವು ಮೂಡಿಸಲಾಗುತ್ತಿದೆ. ನಂತರ ಅವರು ಎಚ್ಚೆತ್ತುಕೊಳ್ಳದಿದ್ದರೆ ಎಲ್ಲಾ ತಾಲ್ಲೂಕುಗಳಲ್ಲೂ ದಾಳಿ ಮಾಡುವುದಾಗಿ ಎಚ್ಚರಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಟಿ.ಅಮರ್‌ನಾಥ್, ಡಾ.ಸಿರಾಜ್, ಡಾ.ರವಿ, ಡಾ.ಉದಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

- Call for authors -

LEAVE A REPLY

Please enter your comment!
Please enter your name here