ಸರಕಾರದ ವಿರುದ್ಧ ಹೋರಾಟ: ಆಗಸ್ಟ್ 4 ರಂದು ಜೆಡಿಎಸ್ ನಾಯಕರ ಸಭೆ ಕರೆದ ದೇವೇಗೌಡ

0
1

ಬೆಂಗಳೂರು: ರಾಜ್ಯ ಸರ್ಕಾರದ ಜನ ವಿರೋಧಿ ಕಾಯಿದೆ ತಿದ್ದುಪಡಿಗಳ ಬಗ್ಗೆ ಪ್ರತಿಭಟಿಸಲು ಪೂರ್ವ ಬಾವಿ ಸಭೆ ಕರೆದಿದ್ದೇವೆ.ನಾಲ್ಕನೇ ತಾರೀಕು ಜೆಪಿ ಭವನದಲ್ಲಿ ಜೆಡಿಎಸ್ ಪಕ್ಷದ ಶಾಸಕರು, ಸೋತ ಅಭ್ಯರ್ಥಿಗಳು, ಜಿಲ್ಲಾ ಅಧ್ಯಕ್ಷರು ಸಭೆಯಲ್ಲಿ ಭಾಗಿಯಾಗಲಿದ್ದಾರೆ ಹಾಗೂ ತಾಲೂಕು ಅಧ್ಯಕ್ಷರ ಸಭೆಯನ್ನು ಮತ್ತೊಂದು ಬಾರಿ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಹೇಳಿದ್ದಾರೆ.

ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ದೊಡ್ಡಗೌಡರು,
ಕೊರೋನ ಇದ್ದರೂ ನಾವು ಯಾವ ರೀತಿ ಹೋರಾಟ ಮಾಡಬೇಕು ಅಂತಾ ಸಮಾಲೋಚನೆ ಮಾಡುತ್ತೇವೆ.
ನಾಲ್ಕನೇ ತಾರೀಖು ನಡೆಯುವ ಸಭೆಯಲ್ಲಿ ನಿರ್ಧಾರ ಮಾಡುತ್ತೇವೆ ರಾಜ್ಯಾದ್ಯಂತ ಯಾವ ರೀತಿ ಪ್ರತಿಭಟನೆ ಮಾಡಬೇಕು ಎಂದು ಸಭೆಯಲ್ಲಿ ನಿರ್ಧಾರ ಮಾಡುತ್ತೇವೆ.
ರಾಜ್ಯ ಸರ್ಕಾರ ರೈತವಿರೋಧಿ ಕಾಯಿದೆ ತಿದ್ದುಪಡಿ ಗಳ ವಿರೋಧ ಪ್ರತಿಭಟನೆಗೆ ನಿರ್ಧಾರ ಮಾಡುತ್ತೇವೆ. ಇದರ ಬಗ್ಗೆ ರಾಜ್ಯಪಾಲರಿಗೆ ಪತ್ರ ಬರೆಯುತ್ತೇವೆ. ಜೊತೆಗೆ
ಅಧಿವೇಶನ ಕರೆಯಲು ರಾಜ್ಯ ಸರ್ಕಾರ ಮೀನಾಮೇಷ ಎಣಿಸುತ್ತಿದೆ ಇದರ ಬೆಗ್ಗೆ ಕೂಡ ರಾಜ್ಯಪಾಲರ ಗಮನಕ್ಕೆ ತರುತ್ತೀವಿ ಎಂದ್ರು.

ರಾಜ್ಯ ಸರ್ಕಾರ ಟಿಪ್ಪು ವಿಚಾರವನ್ನು ಪಠ್ಯದಿಂದ ತೆಗೆದ ವಿಚಾರ ಹಿಂದೆ ಪ್ರಾಥಮಿಕ ಶಾಲೆಯಲ್ಲಿ ಟಿಪ್ಪು ಪಾಠವನ್ನು ನಾವೇ ಓದಿದ್ದೇವೆ ಟಿಪ್ಪು ಹೆಸರಲ್ಲಿ ರೆಸಿಡೆನ್ಸಿಯಲ್ ಶಾಲೆ ಮಾಡಿದ್ದೇವೆ.
ಗುಲ್ಬರ್ಗ, ಬಿಜಾಪುರ, ಶ್ರೀರಂಗಪಟ್ಟಣ, ರಾಮನಗರ,ಧಾರವಾಡದಲ್ಲಿ ಟಿಪ್ಪು ಹೆಸರಲ್ಲಿ ರೆಸಿಡೆನ್ಸಿಯಲ್ ಶಾಲೆಗಳು ಇವೆ ಆಗ ಯಾರೂ ವಿರೋಧ ಮಾಡಿರಲಿಲ್ಲ
ಈಗ ಈ ವಿಚಾರದಲ್ಲಿ ಅನಗತ್ಯ ವಿವಾದ ಸೃಷ್ಟಿ ಮಾಡೋದು ಬೇಕಿರಲಿಲ್ಲ ಈ ಬಗ್ಗೆ ಸರ್ಕಾರ ಮತ್ತೆ ಪರಿಶೀಲನೆ ಮಾಡಬೇಕು ಎಲ್ಲರಿಗೂ ಸಮಾಧಾನ ಆಗುವಂತಹ ನಿರ್ಧಾರ ತೆಗೆದುಕೊಳ್ಳಬೇಕು ಎಂದ್ರು.

ಸಿ ಪಿ ಯೋಗೇಶ್ವರ್ ಆರೋಪಕ್ಕೆ ಯೋಗೇಶ್ವರ್ ಮಾಡಿರುವ ಆರೋಪಕ್ಕೆ ಅದಕ್ಕೇನಾದ್ರೂ ಸಾಕ್ಷಿಯಾಧಾರ ಇದೀಯಾ ?
ಕುಮಾರಸ್ವಾಮಿ ಕದ್ದು ಹೋಗಿ ಯಾರನ್ನೂ ಭೇಟಿ ಮಾಡುವ ಅವಶ್ಯಕತೆ ಇಲ್ಲ . ಯಡಿಯೂರಪ್ಪ ಅವರು ಹೇಳಿದಂತೆ ಒಂದು ಕಾಲದಲ್ಲಿ ಕುಮಾರಸ್ವಾಮಿ ಅಧಿಕಾರ ಮಾಡಿದ್ದಾರೆ. ರಾಜಕಾರಣಿಗಳು ಸುಮ್ಮನೆ ಈ ರೀತಿ ಮತ್ತೊಬ್ಬರ ಲಘುವಾಗಿ ಮಾತಾಡಬಾರದು ಅಂತ ಮಾಜಿ ಪ್ರಧಾನಿ ಹೇಳಿದರು

ಸಬ್ ಇನ್ಸ್ ಪೆಕ್ಟರ್ ಕಿರಣ್ ಆತ್ಮಹತ್ಯೆ ಪ್ರಕರಣದ ಸಂಪೂರ್ಣ ತನಿಖೆ ಆಗಬೇಕು.ಆತ್ಮಹತ್ಯೆ ಮಾಡಿಕೊಳ್ಳೊ ಮಟ್ಟಕ್ಕೆ ಹಿಂಸೆ ಕೊಟ್ಟಿದ್ದಾರೆ ಅಂತ ಹೇಳುತ್ತಿದ್ದಾರೆ ಗೃಹ ಸಚಿವರು ಇದರ ಬಗ್ಗೆ ಸೂಕ್ತ ತನಿಖೆ ಮಾಡಬೇಕು‌ ಇದನ್ನು ಸರ್ಕಾರ ಸರಿಯಾದ ತನಿಖೆ ಮಾಡದೇ ಹೋದ್ರೆ ಸರ್ಕಾರದ ವಿರುದ್ದ ಹೋರಾಟ ಮಾಡಬೇಕಾಗುತ್ತೆ.ಗೃಹ ಸಚಿವರು ಯಾವುದೇ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದ್ರು.

ಜೆಡಿಎಸ್ ಕಾರ್ಯಕರ್ತರನ್ನ ಡಿಕೆ ಬ್ರದರ್ಸ್ ಕಾಂಗ್ರೆಸ್ ಸೆಳೆಯುತ್ತಾರೆಂಬ ವಿಚಾರಕ್ಕೆ ನಾನು ಊಹಾಪೋಹದ ಮಾತುಗಳಿಗೆ ಉತ್ತರ ನೀಡಲ್ಲ. ನನಗು ಸಾಕಷ್ಟು ರಾಜಕೀಯ ಅನುಭವ ಇದೆ. ಏನು ನಡೆಯುತ್ತಿದೆ ಎಲ್ಲವೂ ಗೊತ್ತಿದೆ.
ಅವರ ಪಕ್ಷದ ತತ್ವ ಸಿದ್ಧಾಂತ‌ ಒಪ್ಪಿ ಬರೋದಾದರೆ ಬನ್ನಿ ಎಂದಿದ್ದಾರೆ. ಸೂಕ್ತ ಸಂದರ್ಭದಲ್ಲಿ ಈ ಬಗ್ಗೆ ನಾನು ಮಾತನಾಡುತ್ತೇನೆ. ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಹೇಳಿದರು.

- Call for authors -

LEAVE A REPLY

Please enter your comment!
Please enter your name here