ರೈತರ ಸಾಲ ಮನ್ನಾದಿಂದ ರೈತರಿಗೆ ಅನುಕೂಲವಾಗ ಬೇಕು ಮಧ್ಯವರ್ತಿಗಳು ದುಡ್ಡು ತಿನ್ನುವಂತಾಗಬಾರದು: ಸಿಎಂ
- by Suddi Team
- June 25, 2018
- 503 Views
ಬೆಂಗಳೂರು: ವಿಧಾನಸೌಧದಲ್ಲಿ ಕಮೀಷನ್ ವ್ಯವಹಾರ ನಡೆಯುತ್ತಿರುವುದು ನನಗೆ ಗೊತ್ತಿದೆ. ರೈತರ ಸಾಲ ಮನ್ನಾ ಮಾಡುವುದರಿಂದ ರೈತರಿಗೆ ಅನುಕೂಲವಾಗಬೇಕೇ ಹೊರತು ಯಾರೋ ಮಧ್ಯ ವರ್ತಿಗಳು ದುಡ್ಡು ತಿಂದು ಹೋಗುವಂತಾಗಬಾರದು ಎಂದು ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ರೈತರ ಸಾಲ ಮನ್ನಾ ಕುರಿತಂತೆ ಸಹಕಾರಿ ಬ್ಯಾಂಕ್ ಗಳ ಅಧ್ಯಕ್ಷರು ಮತ್ತು ನಿರ್ದೇಶಕರೊಂದಿಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಸುತ್ತಿದ್ದಾರೆ. ಸಭೆಗೂ ಮುನ್ನ ಸುದ್ಧಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಈಗಾಗಲೇ ಸಹಕಾರಿ ಬ್ಯಾಂಕ್ ಗಳಲ್ಲಿನ 8 ಸಾವಿರ ಕೋಟಿ ರೂ ಸಾಲವನ್ನು ಮನ್ನಾ ಮಾಡಲಾಗಿದೆ. ಇನ್ನೂ 10 ಸಾವಿರ ಕೋಟಿ ರೂ.ಸಾಲ ಮನ್ನಾ ಮಾಡಬೇಕು. ಮುಂದಿನ ಮಾರ್ಚ್ ಅಂತ್ಯದವರಗಿನ ಸಾಲ ಮನ್ನಾ ಮಾಡಬೇಕು ಎಂಬ ಒತ್ತಾಯವಿದೆ. ಅದೇ ವೇಳೆ ಸರ್ಕಾರಿ ನೌಕರರ ವೇತನ ಹೆಚ್ಚಳ ಮಾಡಿರೋದ್ರಿಂದ 16,000 ಕೋಟಿ ರೂ.ಹೆಚ್ಚಿನ ಹೊರೆಯಾಗಿದೆ. ಮತ್ತೊಂದು ಕಡೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ ಬಜೆಟ್ ನ್ನು ಮುಂದುವರಿಸಿ ಎಂದು ಹೇಳುತ್ತಿದ್ದಾರೆ.
ನಾನು ಯಾರ ಹಂಗಿನಲ್ಲೂ ಇಲ್ಲ. ನನಗೆ ಯಾರು ಭಿಕ್ಷೆ ಕೊಟ್ಟಿಲ್ಲ. ಈ ಸರ್ಕಾರ ಎಷ್ಟು ದಿನ ಇರುತ್ತೋ ಇಲ್ಲವೋ ಗೊತ್ತಿಲ್ಲ ಅದಕ್ಕೆ ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ಸಾಲ ಮನ್ನಾ ಮಾಡಬೇಡಿ ಅಂತಾ ಹಣಕಾಸು ಇಲಾಖೆ ಅಧಿಕಾರಿಗಳೇ ಹೇಳುತ್ತಿರುವುದು ನನ್ನ ಗಮನಕ್ಕೂ ಬಂದಿದೆ. ನಾನು ಹಣಕಾಸು ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡುತ್ತೇನೆ. ವಿಧಾನಸೌಧದಲ್ಲಿ ಕಮೀಷನ್ ವ್ಯವಹಾರ ನಡೆಯುತ್ತಿರುವುದು ನಮಗೆ ಗೊತ್ತಿದೆ. ರೈತರ ಸಾಲ ಮನ್ನಾ ಮಾಡುವುದರಿಂದ ರೈತರಿಗೆ ಅನುಕೂಲವಾಗಬೇಕು. ಯಾರೋ ಮಧ್ಯ ವರ್ತಿಗಳು ದುಡ್ಡು ತಿಂದು ಹೋಗುವಂತಾಗಬಾರದು ಎಂದರು.
Related Articles
Thank you for your comment. It is awaiting moderation.
Comments (0)