ಸಚಿವರು, ಶಾಸಕರಿಗೆ ಸಿಎಂ ಉಪಹಾರ ಕೂಟ: ಇದು ರಾಜೀನಾಮೆ ಪೂರ್ವಭಾವಿ ಸಭೆಯಾ?
- by Suddi Team
- May 27, 2026
- 143 Views
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ವದಂತಿಗಳು ತಾರಕಕ್ಕೇರಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಹಿರಿಯ ಸಚಿವರು ಹಾಗೂ ಪ್ರಮುಖ ಶಾಸಕರಿಗಾಗಿ ಹಠಾತ್ ಉಪಹಾರ ಕೂಟ ಆಯೋಜಿಸಿರುವುದು ತೀವ್ರ ಕುತೂಹಲ ಮೂಡಿಸಿದೆ. ಹೈಕಮಾಂಡ್ ಸೂಚನೆ ಮೇರೆಗೆ ಮುಖ್ಯಮಂತ್ರಿಗಳು ಶೀಘ್ರದಲ್ಲೇ ಪದತ್ಯಾಗ ಮಾಡಲಿದ್ದಾರೆ ಎಂಬ ಚರ್ಚೆಗಳ ನಡುವೆ ನಡೆದಿರುವ ಈ ಸಭೆ, ರಾಜೀನಾಮೆಯ ಸ್ಪಷ್ಟ ಸುಳಿವೇ ಎಂಬ ಪ್ರಶ್ನೆ ಮೂಡಿಸಿದೆ.
ನವದೆಹಲಿಯಲ್ಲಿ ಕಾಂಗ್ರೆಸ್ ವರಿಷ್ಠರೊಂದಿಗೆ ನಡೆದ ಸರಣಿ ಸಭೆಗಳ ಬೆನ್ನಲ್ಲೇ ಸಿಎಂ ಈ ಹೆಜ್ಜೆ ಇಟ್ಟಿದ್ದಾರೆ. ಅಧಿಕಾರ ಹಂಚಿಕೆ ಸೂತ್ರದ ಅನ್ವಯ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವ ಮುನ್ನ, ತಮ್ಮ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಹಾಗೂ ಇದುವರೆಗೆ ನೀಡಿದ ಸಹಕಾರಕ್ಕೆ ಧನ್ಯವಾದ ಅರ್ಪಿಸಲು ಈ ಬ್ರೇಕ್‌ಫಾಸ್ಟ್ ಮೀಟಿಂಗ್ ಕರೆಯಲಾಗಿದೆ ಎಂದು ಪಕ್ಷದ ಆಂತರಿಕ ಮೂಲಗಳು ತಿಳಿಸಿವೆ.
ಮತ್ತೊಂದೆಡೆ, ಈ ಉಪಹಾರ ಕೂಟದ ನೆಪದಲ್ಲಿ ಮುಖ್ಯಮಂತ್ರಿಗಳು ತಮ್ಮ ಆಪ್ತ ಬಣದ ಶಾಸಕರೊಂದಿಗೆ ಮುಂದಿನ ರಾಜಕೀಯ ತಂತ್ರಗಾರಿಕೆ ಬಗ್ಗೆ ಚರ್ಚಿಸಲಿದ್ದಾರೆ ಎಂದೂ ಹೇಳಲಾಗುತ್ತಿದೆ. ಈ ಸಭೆಯ ಬಳಿಕ ರಾಜ್ಯ ಕಾಂಗ್ರೆಸ್ ಉಸ್ತುವಾರಿಗಳು ಬೆಂಗಳೂರಿಗೆ ಆಗಮಿಸಲಿದ್ದು, ಹೈಕಮಾಂಡ್‌ನ ಅಂತಿಮ ಸಂದೇಶದೊಂದಿಗೆ ಅಧಿಕೃತ ರಾಜೀನಾಮೆ ಪ್ರಕ್ರಿಯೆ ಚುರುಕುಗೊಳ್ಳುವ ಸಾಧ್ಯತೆಯಿದೆ.
Related Articles
Thank you for your comment. It is awaiting moderation.


Comments (0)