ಜಯನಗರದಲ್ಲಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ: ಜೂ.12ರಿಂದ 2 ದಿನಗಳ ಅಪೂರ್ವ ಅವಕಾಶ!
- by Suddi Team
- June 11, 2026
- 12 Views
ಬೆಂಗಳೂರು: ಕಲಾಭಿಮಾನಿಗಳಿಗೆ ಮತ್ತು ಉದಯೋನ್ಮುಖ ಗಾಯಕರಿಗೆ ಇಲ್ಲೊಂದು ಸುವರ್ಣಾವಕಾಶ ಎದುರಾಗಿದೆ. ‘ಪರಮ್ ಕಲ್ಚರ್’ ಹಾಗೂ ‘ಹರಿವಂಶ ಗ್ರೂಪ್’ ಸಹಯೋಗದೊಂದಿಗೆ ಜಯನಗರದ ಯುವಕ ಸಂಘದಲ್ಲಿ ಜೂನ್ 12 ಮತ್ತು 13ರಂದು ಸಂಜೆ 6 ರಿಂದ 8 ಗಂಟೆಯವರೆಗೆ ಎರಡು ದಿನಗಳ ವಿಶೇಷ ಪ್ರಿ-ಕನ್ಸರ್ಟ್ ಸಂಗೀತ ಕಾರ್ಯಾಗಾರ ‘ಭಜ ಮನ’ವನ್ನು (Pre-Concert workshop) ಹಮ್ಮಿಕೊಳ್ಳಲಾಗಿದೆ. ಜಾಗತಿಕ ಮಟ್ಟದಲ್ಲಿ ಭಕ್ತಿ ಸಂಗೀತದ ಮೂಲಕ ಸನ್ಸೇಷನ್ ಸೃಷ್ಟಿಸಿರುವ ಖ್ಯಾತ ಯುವ ಶಾಸ್ತ್ರೀಯ ಗಾಯಕಿ ಸೂರ್ಯಗಾಯತ್ರಿ ಅವರು ಈ ಕಾರ್ಯಾಗಾರವನ್ನು ಮುನ್ನಡೆಸಲಿದ್ದಾರೆ.
ಈ ಕಾರ್ಯಾಗಾರದಲ್ಲಿ ಭಾಗವಹಿಸುವ ಆಸಕ್ತರಿಗೆ ಸೂರ್ಯಗಾಯತ್ರಿ ಅವರಿಂದ ನೇರವಾಗಿ ಭಜನೆಗಳು, ದಾಸರಪದಗಳು ಮತ್ತು ಅಭಂಗ್‌ಗಳನ್ನು ಕಲಿಯುವ ಅಪೂರ್ವ ಅವಕಾಶ ಸಿಗಲಿದೆ. ಜೊತೆಗೆ, ಅವರ ಕಲಾ ಜರ್ನಿ ಮತ್ತು ಭಕ್ತಿ ಸಂಗೀತದ ಅನುಭವಗಳನ್ನು ನೇರವಾಗಿ ಅವರಿಂದಲೇ ಕೇಳಿ ತಿಳಿಯಬಹುದು. ಒಟ್ಟು 4 ಗಂಟೆಗಳ ಕಾಲ ನೇರ ಕಲಿಕೆ ಇರಲಿದ್ದು, ಕಲಿಕೆಗೆ ಅಗತ್ಯವಿರುವ ವಿಶೇಷ ಸಾಹಿತ್ಯ ಹಾಗೂ ನೋಟ್ಸ್‌ಗಳನ್ನೂ ಇಲ್ಲಿ ಪಡೆಯಬಹುದಾಗಿದೆ.
ವೇದಿಕೆ ಹಂಚಿಕೊಳ್ಳುವ ಸುವರ್ಣಾವಕಾಶ:
ಕಾರ್ಯಾಗಾರವು ಕೇವಲ ಕಲಿಕೆಗೆ ಸೀಮಿತವಾಗಿರದೆ, ಪ್ರದರ್ಶನಕ್ಕೂ ದಾರಿ ಮಾಡಿಕೊಡಲಿದೆ. ಇಲ್ಲಿ ಭಾಗವಹಿಸುವ ಪ್ರತಿಭಾವಂತ ಕಲಾಭಿಮಾನಿಗಳನ್ನು ಜೂನ್ 14ರಂದು ಸಂಜೆ 5 ಗಂಟೆಯಿಂದ ಮೀನಾಕ್ಷಿ ರಂಗಮಂಚದಲ್ಲಿ ನಡೆಯಲಿರುವ ಭವ್ಯ ಲೈವ್ ಕನ್ಸರ್ಟ್‌ನಲ್ಲಿ ಸೂರ್ಯಗಾಯತ್ರಿ ಅವರೊಂದಿಗೆ ವೇದಿಕೆ ಹಂಚಿಕೊಂಡು ಹಾಡಲು ಪರಿಗಣಿಸುವ ಬಂಪರ್ ಚಾನ್ಸ್ ಇರಲಿದೆ.
ಉಚಿತ ಕನ್ಸರ್ಟ್ ಪಾಸ್ ಲಭ್ಯ:
ಈ ಕಾರ್ಯಾಗಾರದಲ್ಲಿ ಕೇವಲ ಕಲಿಕೆ ಮಾತ್ರವಲ್ಲದೆ ಹೆಚ್ಚುವರಿ ಸೌಲಭ್ಯಗಳೂ ಸೇರಿವೆ. ಭಾಗವಹಿಸುವ ಪ್ರತಿಯೊಬ್ಬರಿಗೂ ಉಚಿತ ಕಲಿಕಾ ಸಾಮಗ್ರಿಗಳ ಜೊತೆಗೆ ಜೂನ್ 14ರಂದು ನಡೆಯಲಿರುವ ಸೂರ್ಯಗಾಯತ್ರಿ ಅವರ ಭವ್ಯ ಲೈವ್ ಕನ್ಸರ್ಟ್‌ನ ಕಂಪ್ಲಿಮೆಂಟರಿ ಪಾಸ್ ಅನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು.
ಜಾಗತಿಕ ತಾರೆಯ ಮಾರ್ಗದರ್ಶನ:
ಸೂರ್ಯಗಾಯತ್ರಿ ಅವರು ಮುಂಬೈನ ಷಣ್ಮುಖಾನಂದ ಸಭಾದಿಂದ ಕಿರಿಯ ವಯಸ್ಸಿನಲ್ಲೇ ಪ್ರತಿಷ್ಠಿತ ಎಂ.ಎಸ್. ಸುಬ್ಬುಲಕ್ಷ್ಮಿ ಫೆಲೋಶಿಪ್ ಪುರಸ್ಕೃತರಾಗಿದ್ದಾರೆ. ಇತ್ತೀಚೆಗಷ್ಟೇ ಅಮೆರಿಕದ 29 ನಗರಗಳ ಯಶಸ್ವಿ ಪ್ರವಾಸ ಮುಗಿಸಿ ಬಂದಿರುವ ಹಾಗೂ ದೇಶ-ವಿದೇಶಗಳಲ್ಲಿ 500ಕ್ಕೂ ಹೆಚ್ಚು ಲೈವ್ ಪ್ರದರ್ಶನಗಳನ್ನು ನೀಡಿದ್ದಾರೆ.
Related Articles
Thank you for your comment. It is awaiting moderation.


Comments (0)