ತುಂಗಭದ್ರಾ ಜಲಾಶಯದ ಹೊಸ ಕ್ರಸ್ಟ್ ಗೇಟ್‌ಗಳ ಉದ್ಘಾಟನಾ ಸಮಾರಂಭದ ನೇರ ದೃಶ್ಯಾವಳಿಗಳನ್ನು ವೀಕ್ಷಿಸಿ…!

ಕೊಪ್ಪಳ:ತುಂಗಭದ್ರಾ ಜಲಾಶಯದ ಇತಿಹಾಸದಲ್ಲೇ ಮಹತ್ವದ ಕ್ಷಣಕ್ಕೆ ವೇದಿಕೆ ಸಿದ್ಧವಾಗಿದೆ. ಅಣೆಕಟ್ಟಿನ ಎಲ್ಲಾ 33 ನೂತನ ಕ್ರಸ್ಟ್ ಗೇಟ್‌ಗಳ ಅಧಿಕೃತ ಉದ್ಘಾಟನಾ ಸಮಾರಂಭಕ್ಕಾಗಿ ಆಗಮಿಸಿದ ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರಿಗೆ ಕೊಪ್ಪಳ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳ ವತಿಯಿಂದ ಅದ್ಧೂರಿ ಸ್ವಾಗತ ಕೋರಲಾಯಿತು.

ಮುನಿರಾಬಾದ್‌ನ ರಿಸರ್ವ್ ಪೊಲೀಸ್ ಕವಾಯತು ಮೈದಾನದ ಹೆಲಿಪ್ಯಾಡ್‌ಗೆ ಬಂದಿಳಿದ ಮುಖ್ಯಮಂತ್ರಿಯವರಿಗೆ ಪೊಲೀಸ್ ಇಲಾಖೆಯ ವತಿಯಿಂದ ಸಕಲ ಸರ್ಕಾರಿ ಮರ್ಯಾದೆಗಳೊಂದಿಗೆ ಗೌರವ ವಂದನೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಮುಖ ಗಣ್ಯರು:

ಈ ಐತಿಹಾಸಿಕ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯರಾದ ಡಾ. ಸೈಯದ್ ನಾಸಿರ್ ಹುಸೇನ್, ಲೋಕಸಭಾ ಸಂಸದರಾದ ರಾಜಶೇಖರ ಹಿಟ್ನಾಳ್, ಸಚಿವರಾದ ಹೆಚ್.ಕೆ. ಪಾಟೀಲ್ ಮತ್ತು ಶಿವರಾಜ ತಂಗಡಗಿ ಉಪಸ್ಥಿತರಿದ್ದರು.

ಇವರೊಂದಿಗೆ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ್, ಬಸವರಾಜ ರಾಯರೆಡ್ಡಿ, ಜಿ.ಎನ್. ಗಣೇಶ್ ಹಾಗೂ ಮಾಜಿ ಸಚಿವರಾದ ಅಮರೇಗೌಡ ಪಾಟೀಲ್ ಬೈಯಾಪುರ ಅವರು ಮುಖ್ಯಮಂತ್ರಿಯವರನ್ನು ಬರಮಾಡಿಕೊಂಡರು. ಆಡಳಿತ ವಿಭಾಗದಿಂದ ಬಳ್ಳಾರಿ ವಲಯದ ಐಜಿಪಿ ಡಾ. ಪಿ.ಎಸ್. ಹರ್ಷ, ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಹಾಗೂ ಜಿ.ಪಂ. ಸಿಇಒ ವರ್ಣೀತ್ ನೇಗಿ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಹಾಜರಿದ್ದರು

 

Related Articles

Comments (0)

Leave a Comment