ಗೃಹ ಜ್ಯೋತಿ ಫಲಾನುಭವಿಗಳಿಗೆ ಎಚ್ಚರ: ಜುಲೈ 1 ರಿಂದ ಮನೆ-ಮನೆಗೆ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ! ರೆಡಿಯಾಗಿರಲಿ ಈ 7 ದಾಖಲೆಗಳು

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹ ಜ್ಯೋತಿ’ ಉಚಿತ ವಿದ್ಯುತ್ ಯೋಜನೆಯ ಅರ್ಹ ಫಲಾನುಭವಿಗಳ ಮರುಪರಿಶೀಲನೆಗೆ ಇಂಧನ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಜುಲೈ 1 ರಿಂದ ರಾಜ್ಯಾದ್ಯಂತ ಎಲ್ಲಾ ಎಸ್ಕಾಂಗಳ ಸಿಬ್ಬಂದಿ ಹಾಗೂ ಮೀಟರ್ ರೀಡರ್‌ಗಳು ಗ್ರಾಹಕರ ಮನೆ ಬಾಗಿಲಿಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ನಡೆಸಲಿದ್ದಾರೆ.

ಯೋಜನೆ ಜಾರಿಗೆ ಬಂದು ವರ್ಷ ಕಳೆದಿದ್ದು, ಅರ್ಹರಿಗೆ ಮಾತ್ರ ಯೋಜನೆಯ ಲಾಭ ಸಿಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಜಂಟಿ ಸರ್ವೇ ನಡೆಸಲಾಗುತ್ತಿದೆ.

ಸ್ಥಳದಲ್ಲೇ ಮೊಬೈಲ್ ಆಪ್ ಮೂಲಕ ಮಾಹಿತಿ ಸಂಗ್ರಹ

ಎಸ್ಕಾಂ ಸಿಬ್ಬಂದಿಗಳು ಪ್ರತಿ ಮನೆಗೆ ಭೇಟಿ ನೀಡಿದಾಗ ಫಲಾನುಭವಿಗಳ ಮೂಲ ದಾಖಲೆಗಳನ್ನು ಪರಿಶೀಲಿಸಲಿದ್ದಾರೆ. ಸ್ಥಳದಲ್ಲೇ ವಿಶೇಷ ಮೊಬೈಲ್ ಆಪ್ ಹಾಗೂ ಸ್ವಯಂ ಘೋಷಣಾ ಪತ್ರದ ಮೂಲಕ ಹೊಸದಾಗಿ ಮಾಹಿತಿಗಳನ್ನು ಅಪ್‌ಡೇಟ್ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಹಕರು ಮುಂಚಿತವಾಗಿಯೇ ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳುವುದು ಉತ್ತಮ.

ಪರಿಶೀಲನೆಗೆ ಬೇಕಾಗುವ 7 ಪ್ರಮುಖ ದಾಖಲೆಗಳು:

ಮನೆಗೆ ಭೇಟಿ ನೀಡುವ ಸಿಬ್ಬಂದಿಗೆ ತೋರಿಸಲು ಈ ಕೆಳಗಿನ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಇಂಧನ ಇಲಾಖೆ ಮನವಿ ಮಾಡಿದೆ:

ಆಧಾರ್ ಕಾರ್ಡ್ (ಪರಿಶೀಲನೆಗಾಗಿ ಮಾತ್ರ)

ಫಲಾನುಭವಿಯ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ

ಮತದಾರರ ಗುರುತಿನ ಚೀಟಿ (ವೋಟರ್ ಐಡಿ)

ಪ್ಯಾನ್ ಕಾರ್ಡ್ (PAN Card)

ರೇಷನ್ ಕಾರ್ಡ್ (ಪಡಿತರ ಚೀಟಿ)

ಜಾತಿ ಪ್ರಮಾಣ ಪತ್ರ

ಬಾಡಿಗೆ ಒಪ್ಪಂದದ ಪತ್ರ (ಬಾಡಿಗೆ ಮನೆಯಲ್ಲಿದ್ದವರಿಗೆ ಮಾತ್ರ ಅನ್ವಯ)

ಐದು ಎಸ್ಕಾಂಗಳ ವ್ಯಾಪ್ತಿಯಲ್ಲಿ ಕಡ್ಡಾಯ ಪರಿಶೀಲನೆ

ರಾಜ್ಯದ ಐದೂ ಪ್ರಮುಖ ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ (BESCOM), ಹೆಸ್ಕಾಂ (HESCOM), ಮೆಸ್ಕಾಂ (MESCOM), ಜೆಸ್ಕಾಂ (GESCOM) ಹಾಗೂ ಚೆಸ್ಕ್ (CESC) ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಈ ಪ್ರಕ್ರಿಯೆ ಆರಂಭವಾಗಲಿದೆ.

ಸ್ಥಳದಲ್ಲೇ ಮೀಟರ್ ರೀಡರ್ ಮೂಲಕ ಲೈವ್ ವೆರಿಫಿಕೇಶನ್ ಮಾಡುವುದು ಮಾತ್ರ ಈ ಪ್ರಕ್ರಿಯೆಯ ಏಕೈಕ ಮಾರ್ಗವಾಗಿದೆ. ಯಾವುದೇ ಗೊಂದಲಗಳಿಗೆ ಅವಕಾಶ ನೀಡದೆ, ಶೀಘ್ರವಾಗಿ ಪ್ರಕ್ರಿಯೆ ಮುಗಿಸಲು ಸಾರ್ವಜನಿಕರು ಮತ್ತು ಫಲಾನುಭವಿಗಳು ಸಿಬ್ಬಂದಿಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಇಂಧನ ಇಲಾಖೆ ಪ್ರಕಟಣೆಯಲ್ಲಿ ಕೋರಿದೆ.

 

Related Articles

Comments (0)

Leave a Comment