ಸ್ಟಿಂಗ್ ಆಪರೇಷನ್ ಹಿಂದೆ ಕೋಟ್ಯಂತರ ರೂಪಾಯಿ ಹರಿದಾಡಿರುವ ಶಂಕೆ:ಇಡಿ ತನಿಖೆಗೆ ಎಚ್‌.ಡಿ. ಕುಮಾರಸ್ವಾಮಿ ಆಗ್ರಹ

ರಾಮನಗರ: ಮಾಜಿ ಮುಖ್ಯಮಂತ್ರಿಗಳ ವಿರುದ್ಧ ಸ್ಟಿಂಗ್ ಆಪರೇಷನ್ ನಡೆಸಲು ಅಪಾರ ಪ್ರಮಾಣದ ನಗದು ಕೈಬದಲಾಗಿದ್ದು, ಈ ಹಗರಣದ ಕುರಿತು ಜಾರಿ ನಿರ್ದೇಶನಾಲಯ (ED) ಹಾಗೂ ಆದಾಯ ತೆರಿಗೆ (IT) ಇಲಾಖೆಯಿಂದ ಸಮಗ್ರ ತನಿಖೆಯಾಗಬೇಕು ಎಂದು ಕೇಂದ್ರ ಸಚಿವ ಎಷ್.ಡಿ ಕುಮಾರಸ್ವಾಮಿ  ಅವರು ಒತ್ತಾಯಿಸಿದರು.

ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಸ್ಟಿಂಗ್ ಆಪರೇಷನ್ ವಿಚಾರವಾಗಿ ಗಂಭೀರ ಆರೋಪಗಳನ್ನು ಮಾಡಿದರು. ಈ ವ್ಯವಸ್ಥಿತ ಸಂಚಿನ ಹಿಂದೆ ₹10 ರಿಂದ ₹15 ಕೋಟಿಗೂ ಅಧಿಕ ಹಣ ಖರ್ಚು ಮಾಡಲಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ನೀಡಿರುವ ಹೇಳಿಕೆಯನ್ನು ಬೆಂಬಲಿಸಿದ ಸಚಿವರು, ಈ ಆರ್ಥಿಕ ವಹಿವಾಟಿನ ಮೂಲವನ್ನು ಪತ್ತೆಹಚ್ಚುವುದು ಅತ್ಯಗತ್ಯ ಎಂದರು.

“ಕೇವಲ ಇಷ್ಟೇ ಹಣ ಎಂದು ಲೆಕ್ಕ ಹಾಕುವುದು ಸರಿಯಲ್ಲ. ಈ ಪ್ರಕರಣದ ಸಂಪೂರ್ಣ ಸತ್ಯಾಂಶಗಳು ಸಾರ್ವಜನಿಕವಾಗಿ ಹೊರಬಂದರೆ, ಇಡೀ ರಾಜ್ಯದ ಗೌರವಕ್ಕೆ ಧಕ್ಕೆ ಬರಲಿದೆ. ಪ್ರಸ್ತುತ ವ್ಯವಸ್ಥೆಯಲ್ಲಿ ಇಂತಹ ಕಲುಷಿತ ವಾತಾವರಣ ಸೃಷ್ಟಿಯಾಗಿದೆ. ಈ ಆಪರೇಷನ್ ಹಿಂದೆ ₹15 ಕೋಟಿಗಿಂತಲೂ ಹೆಚ್ಚಿನ ಅಕ್ರಮ ಹಣಕಾಸು ವ್ಯವಹಾರ ನಡೆದಿರುವ ಸಾಧ್ಯತೆಯಿದೆ. ಜಾರಿ ನಿರ್ದೇಶನಾಲಯ (ಇಡಿ) ತಕ್ಷಣವೇ ಈ ಪ್ರಕರಣವನ್ನು ಕೈಗೆತ್ತಿಕೊಂಡು ತನಿಖೆ ಆರಂಭಿಸಿದರೆ, ಬೃಹತ್ ಮೊತ್ತದ ಹಣ ಹೇಗೆ ಮತ್ತು ಯಾರಿಂದ ಹರಿದಾಡಿದೆ ಎಂಬ ಅಸಲಿ ಸತ್ಯ ಹೊರಬರಲಿದೆ” ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

 

Related Articles

Comments (0)

Leave a Comment