ಮದುವೆ ಸಮಾರಂಭದಲ್ಲಿ ವಿಜಯ್–ತ್ರಿಷಾ ಜೋಡಿ ಪ್ರತ್ಯಕ್ಷ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ ವಿಜಯ್ ಮತ್ತು ನಟಿ ತ್ರಿಷಾ ಕೃಷ್ಣನ್ ಅವರು ಚೆನ್ನೈನಲ್ಲಿ ನಡೆದ ಮದುವೆ ಆರತಕ್ಷತೆ ಸಮಾರಂಭದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದು, ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೈಎಸ್‌ಆರ್‌ಸಿಪಿ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಕುಟುಂಬದ ಮದುವೆ ಸಮಾರಂಭದ ಅಂಗವಾಗಿ ಚೆನ್ನೈನ ಲೀಲಾ ಪ್ಯಾಲೇಸ್‌ನಲ್ಲಿ ನಡೆದ ಅದ್ಧೂರಿ ಆರತಕ್ಷತೆಯಲ್ಲಿ ವಿಜಯ್ ಮತ್ತು ತ್ರಿಷಾ ಭಾಗವಹಿಸಿದ್ದರು. ವೇದಿಕೆಗೆ ತೆರಳಿ ನವಜೋಡಿಗೆ ಶುಭ ಹಾರೈಸಿದರು. ವಿಜಯ್ ಅವರ ತಾಯಿ ಶೋಭಾ ಕೂಡ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ವಿಜಯ್ ಮತ್ತು ತ್ರಿಷಾ ನಡುವಿನ ಸಂಬಂಧದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳು ಹರಿದಾಡುತ್ತಿರುವ ನಡುವೆಯೇ ಇಬ್ಬರೂ ಮತ್ತೆ ಸಾರ್ವಜನಿಕವಾಗಿ ಒಟ್ಟಿಗೆ ಕಾಣಿಸಿಕೊಂಡಿರುವುದು ಚರ್ಚೆಗೆ ಕಾರಣವಾಗಿದೆ.

ಇದಕ್ಕೂ ಮೊದಲು ಚೆನ್ನೈನಲ್ಲಿ ನಡೆದ ಮತ್ತೊಂದು ಮದುವೆ ಸಮಾರಂಭದಲ್ಲಿಯೂ ವಿಜಯ್ ಮತ್ತು ತ್ರಿಷಾ ಒಟ್ಟಿಗೆ ಭಾಗವಹಿಸಿದ್ದರು. ಇದೀಗ ಮತ್ತೊಮ್ಮೆ ಒಂದೇ ಸಮಾರಂಭದಲ್ಲಿ ಕಾಣಿಸಿಕೊಂಡಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

Related Articles

Comments (0)