ಪೋಲೆಂಡ್‌ನ ಕ್ರಾಕೋವ್‌ನಲ್ಲಿ ಗುಂಡಿನ ದಾಳಿ: ಐವರು ಸಾವು
- by Suddi Loka
- November 8, 2026
- 9 Views
ಕ್ರಾಕೋವ್: ಪೋಲೆಂಡ್‌ನ ಕ್ರಾಕೋವ್ ನಗರದ ಕೇಂದ್ರ ಭಾಗದಲ್ಲಿ ನಡೆದ ಭೀಕರ ಗುಂಡಿನ ದಾಳಿಯಲ್ಲಿ ಐವರು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಾಳಿ ನಡೆಸಿದ ಬಂದೂಕುಧಾರಿಯನ್ನು ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ನಗರದ ಪ್ರಮುಖ ಮಾರುಕಟ್ಟೆ ಚೌಕದ ಬಳಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಸ್ಲಾವ್ಕೋವ್ಸ್ಕಾ ರಸ್ತೆಯಿಂದ ಮಾರುಕಟ್ಟೆ ಚೌಕದತ್ತ ಕಾರಿನಲ್ಲಿ ತೆರಳುತ್ತಿದ್ದ ವ್ಯಕ್ತಿ, ಜನರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.
ಮಾಹಿತಿ ಲಭಿಸಿದ ತಕ್ಷಣ ಪೊಲೀಸರು ಮತ್ತು ತುರ್ತು ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿದವು. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಆ್ಯಂಬುಲೆನ್ಸ್‌ಗಳ ಜೊತೆಗೆ ವೈದ್ಯಕೀಯ ಹೆಲಿಕಾಪ್ಟರ್ ಬಳಸಲಾಯಿತು.

ದಾಳಿಕೋರನನ್ನು ಸೆರೆಹಿಡಿಯಲು ಕಾರ್ಯಾಚರಣೆ ನಡೆಸಿದ ಪೊಲೀಸರು, ಆತನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಭದ್ರತಾ ದೃಷ್ಟಿಯಿಂದ ಸ್ಥಳೀಯರು ಮತ್ತು ಪ್ರವಾಸಿಗರಿಗೆ ಘಟನಾ ಪ್ರದೇಶದಿಂದ ದೂರವಿರುವಂತೆ ಸೂಚಿಸಲಾಗಿದೆ.
ಘಟನೆಯ ಬಳಿಕ ಕ್ರಾಕೋವ್‌ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್ ಅವರು ಆಂತರಿಕ ಭದ್ರತಾ ಸಚಿವರಿಂದ ನಿರಂತರ ಮಾಹಿತಿ ಪಡೆಯುತ್ತಿದ್ದಾರೆ. ದಾಳಿಯ ಹಿನ್ನೆಲೆ ಮತ್ತು ಉದ್ದೇಶ ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Comments (0)