ನ.14ರಂದು ತೆಲಂಗಾಣಕ್ಕೆ ರಾಹುಲ್ ಗಾಂಧಿ ಭೇಟಿ ಸಾಧ್ಯತೆ; ಕಪ್ಪು ಬಾವುಟ ಪ್ರದರ್ಶಿಸುವುದಾಗಿ ಬಿಜೆಪಿ ಎಚ್ಚರಿಕೆ

ಹೈದರಾಬಾದ್: ಭಾರತ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನವೆಂಬರ್ 14ರಂದು ತೆಲಂಗಾಣಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ. ಆದರೆ, ಅವರ ಭೇಟಿಗೆ ಬಿಜೆಪಿ ರಾಜ್ಯಾಧ್ಯಕ್ಷ ರಾಮಚಂದರ್ ರಾವ್ ವಿರೋಧ ವ್ಯಕ್ತಪಡಿಸಿದ್ದು, ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ತೆಲಂಗಾಣದ ಜನರಿಗೆ ಆರು ಗ್ಯಾರಂಟಿಗಳನ್ನು ನೀಡಿದ್ದ ರಾಹುಲ್ ಗಾಂಧಿ, ಮೂರು ವರ್ಷ ಕಳೆದರೂ ಒಂದೇ ಒಂದು ಭರವಸೆಯನ್ನು ಈಡೇರಿಸಿಲ್ಲ ಎಂದು ರಾಮಚಂದರ್ ರಾವ್ ಆರೋಪಿಸಿದ್ದಾರೆ.

ಮುಖ್ಯಮಂತ್ರಿ ರೇವಂತ್ ರೆಡ್ಡಿ ನೇತೃತ್ವದ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, ಚುನಾವಣಾ ಭರವಸೆಗಳನ್ನು ಈಡೇರಿಸದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಗೆ ಭಾರತ್ ಶೃಂಗಸಭೆಯಲ್ಲಿ ಭಾಗವಹಿಸುವ ನೈತಿಕ ಹಕ್ಕಿಲ್ಲ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಭೇಟಿಯ ವೇಳೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸುವುದಾಗಿ ಅವರು ತಿಳಿಸಿದ್ದಾರೆ.

Related Articles

Comments (0)