ಪ್ರಕರಣ ಇತ್ಯರ್ಥಕ್ಕೆ ಕಾಲಮಿತಿ: ತಹಶೀಲ್ದಾರ್ ನ್ಯಾಯಾಲಯಗಳಲ್ಲಿ 90 ದಿನ, ಎಸಿ ಕೋರ್ಟಲ್ಲಿ 6 ತಿಂಗಳಲ್ಲಿ ಇತ್ಯರ್ಥ ಕಡ್ಡಾಯ
- by Suddi Loka
- November 22, 2026
- 16 Views
ಬೆಂಗಳೂರು: ಕಂದಾಯ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿ, ಸಾರ್ವಜನಿಕರಿಗೆ ಸಕಾಲದಲ್ಲಿ ನ್ಯಾಯ ಒದಗಿಸಲು ಕಟ್ಟುನಿಟ್ಟಿನ ಕಾಲಮಿತಿ ನಿಗದಿಪಡಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ತಹಶೀಲ್ದಾರ್ ನ್ಯಾಯಾಲಯಗಳಲ್ಲಿ ಯಾವುದೇ ಪ್ರಕರಣ 90 ದಿನಗಳಿಗಿಂತ ಹೆಚ್ಚು ಹಾಗೂ ಉಪವಿಭಾಗಾಧಿಕಾರಿಗಳ ನ್ಯಾಯಾಲಯಗಳಲ್ಲಿ ಆರು ತಿಂಗಳಿಗಿಂತ ಹೆಚ್ಚು ಕಾಲ ಬಾಕಿ ಉಳಿಯಬಾರದು. ಈ ನಿಯಮ ಪಾಲನೆಯ ಮೇಲ್ವಿಚಾರಣೆಯ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ ಎಂದು ಹೇಳಿದರು.

ಕಂದಾಯ ಇಲಾಖೆಯ ಸೇವೆಗಳ ಪ್ರಗತಿ ಮತ್ತು ಗುಣಮಟ್ಟದ ಮೇಲೆ ನಿಗಾ ಇರಿಸಲು ಉಪಮುಖ್ಯಮಂತ್ರಿಗಳ ಡ್ಯಾಶ್ಬೋರ್ಡ್ ರೂಪಿಸುವಂತೆ ಸೂಚಿಸಲಾಗಿದೆ. ಇದರ ಮೂಲಕ ಪ್ರತಿ ಎರಡು ದಿನಗಳಿಗೊಮ್ಮೆ ಇಲಾಖೆಯ ಕಾರ್ಯನಿರ್ವಹಣೆಯನ್ನು ಪರಿಶೀಲಿಸುವುದಾಗಿ ತಿಳಿಸಿದರು.
ಪ್ರಕರಣಗಳು ವರ್ಷಗಟ್ಟಲೆ ಬಾಕಿ ಉಳಿದು ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಬಾರದು. ನಿಗದಿತ ಅವಧಿಯಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿ, ಪಾರದರ್ಶಕ ಹಾಗೂ ಪರಿಣಾಮಕಾರಿ ಸೇವೆ ಒದಗಿಸುವುದು ಅಧಿಕಾರಿಗಳ ಜವಾಬ್ದಾರಿ ಎಂದು ಅವರು ಹೇಳಿದರು.
ಕಂದಾಯ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿ, ಸಾರ್ವಜನಿಕರಿಗೆ ಸಕಾಲದಲ್ಲಿ ನ್ಯಾಯ ದೊರೆಯುವಂತೆ ಮಾಡುವುದು ನಮ್ಮ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಕಂದಾಯ ನ್ಯಾಯಾಲಯಗಳ ಪ್ರಕರಣಗಳ ಇತ್ಯರ್ಥಕ್ಕೆ ಕಟ್ಟುನಿಟ್ಟಿನ ಕಾಲಮಿತಿ ನಿಗದಿಪಡಿಸಲಾಗಿದೆ.
ತಹಶೀಲ್ದಾರ್ ನ್ಯಾಯಾಲಯಗಳಲ್ಲಿ ಯಾವುದೇ ಪ್ರಕರಣ 90 ದಿನಗಳಿಗಿಂತ ಹೆಚ್ಚು ಹಾಗೂ ಉಪವಿಭಾಗಾಧಿಕಾರಿಗಳ ನ್ಯಾಯಾಲಯಗಳಲ್ಲಿ ಆರು ತಿಂಗಳಿಗಿಂತ ಹೆಚ್ಚು ಕಾಲ ಬಾಕಿ ಉಳಿಯುವಂತಿಲ್ಲ. ಈ ಕಾಲಮಿತಿಯನ್ನು ಅಧಿಕಾರಿಗಳು ಕಡ್ಡಾಯವಾಗಿ ಪಾಲಿಸಬೇಕು. ಪ್ರಕರಣಗಳ ಇತ್ಯರ್ಥದಲ್ಲಿ ವಿಳಂಬವಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ.
ಕಂದಾಯ ಇಲಾಖೆಯ ಎಲ್ಲ ಸೇವೆಗಳ ಪ್ರಗತಿ ಹಾಗೂ ಗುಣಮಟ್ಟದ ಮೇಲೆ ನೇರ ನಿಗಾ ಇರಿಸಲು ಉಪಮುಖ್ಯಮಂತ್ರಿಗಳ ಡ್ಯಾಶ್ಬೋರ್ಡ್ ರೂಪಿಸುವಂತೆ ಸೂಚಿಸಿದ್ದೇನೆ. ಈ ಡ್ಯಾಶ್ಬೋರ್ಡ್ ಮೂಲಕ ಪ್ರತಿ ಎರಡು ದಿನಗಳಿಗೊಮ್ಮೆ ನಾನೇ ಇಲಾಖೆಯ ಕಾರ್ಯನಿರ್ವಹಣೆಯನ್ನು ಪರಿಶೀಲಿಸಲಿದ್ದೇನೆ.
ಕಂದಾಯ ನ್ಯಾಯಾಲಯಗಳಲ್ಲಿ ಪ್ರಕರಣಗಳು ವರ್ಷಗಟ್ಟಲೆ ಬಾಕಿ ಉಳಿದು ಸಾರ್ವಜನಿಕರು ತೊಂದರೆ ಅನುಭವಿಸುವ ಪರಿಸ್ಥಿತಿ ಇರಬಾರದು. ನಿಗದಿತ ಕಾಲಮಿತಿಯಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿ, ಜನರಿಗೆ ಪಾರದರ್ಶಕ ಹಾಗೂ ಪರಿಣಾಮಕಾರಿ ಸೇವೆ ಒದಗಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ.
Ensuring timely justice by clearing pending cases in Revenue Courts is a priority for our Government. Strict timelines have therefore been fixed for disposal of cases.
No case in a Tahsildar Court should remain pending beyond 90 days, and no case before an Assistant Commissioner should remain pending beyond six months. Deputy Commissioners have been made responsible for ensuring these timelines are followed.
I have also directed the creation of a DyCM Dashboard to directly monitor the progress and quality of Revenue Department services. I will personally review the dashboard once every two days.
Revenue Court cases should not remain pending for years and inconvenience the public. Officials must ensure timely disposal, transparency and efficient service delivery.
— Dr. G Parameshwara (@DrParameshwara) November 21, 2026


Comments (0)