ಸಂಪೂರ್ಣ ಸಾಲ ಮನ್ನಾ ವಿಚಾರ: ತಾರಕಕ್ಕೇರಿದ ರೈತರ ಪ್ರತಿಭಟನೆ
- by Suddi Team
- July 9, 2018
- 115 Views
ಬೆಂಗಳೂರು: ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.
ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಇಂದು ಮೌರ್ಯ ಸರ್ಕಲ್ ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಯಲ್ಲಿ ನೂರಾರು ರೈತರು ಭಾಗಿಯಾಗಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸಾಲ ಮನ್ನಾ ಹೆಸರಲ್ಲಿ ಸರ್ಕಾರದಿಂದ ರೈತರಿಗೆ ಅನ್ಯಾಯವಾಗಿದ್ದು, ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿದರು. ಇದೇ ವೇಳೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಹೊರಟ ರೈತರನ್ನು ಪೊಲೀಸರು ಅರ್ಧದಲ್ಲೆ ತಡೆದು, ವಶಕ್ಕೆ ಪಡೆದರು.
ಸಂಪೂರ್ಣ ಸಾಲಮನ್ನಾ ಮಾಡದ ಸರ್ಕಾರದ ವಿರುದ್ದ ರೈತ ಸಮುದಾಯ ತಿರುಗಿಬಿದ್ದಿದೆ. ಒಂದು ಕಡೆ ಕೋಡಿಹಳ್ಳಿ ಚಂದ್ರ ಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆದರೆ. ಮತ್ತೊಂದೆಡೆ ಬೆಂಗಳೂರಿನ ಶೇಷಾದ್ರಿಪುರಂ ನಲ್ಲಿ ಉತ್ತರ ಕರ್ನಾಟಕದ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯಿಂದ ಸಭೆ ನಡೆಯಿತು.
ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ತಾರತಮ್ಯ ಹಾಗೂ ಸಂಪೂರ್ಣ ಸಾಲಮನ್ನಾ ಮಾಡದೇ ಕೇವಲ ಸುಸ್ಥಿದಾರರ ಬೆಳೆ ಸಾಲ ಮನ್ನಾ ಮಾಡಿರುವ ಬಗ್ಗೆ ಚರ್ಚೆ ನಡೆಸಿ ಸರ್ಕಾರದ ವಿರುದ್ದ ಹೋರಾಟದ ರೂಪುರೇಷೆ ಸಿದ್ದಪಡಿಸಿದರು.
Related Articles
Thank you for your comment. It is awaiting moderation.
Comments (0)