ಕಾವೇರಿ ಪ್ರಾಧಿಕಾರಕ್ಕೆ ರಾಜ್ಯದ ಪ್ರತಿನಿಧಿಯಾಗಿ ರಾಕೇಶ್ ಸಿಂಗ್
- by Suddi Team
- June 4, 2018
- 117 Views
ಬೆಂಗಳೂರು: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ರಾಜ್ಯ ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ರನ್ನು ಪ್ರತಿನಿಧಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚಿಸಿ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದ್ದ ಕೇಂದ್ರ ಸರ್ಕಾರ ಕರ್ನಾಟಕ, ತಮಿಳುನಾಡು, ಕೇರಳ ಹಾಗು ಪುದುಚೇರಿ ರಾಜ್ಯಗಳ ಪ್ರತಿನಿಧಿಗಳನ್ನು ನೇಮಿಸುವಂತೆ ಆಯಾ ರಾಜ್ಯಗಳಿಗೆ ಸೂಚನೆ ನೀಡಿತ್ತು. ಕೇಂದ್ರದ ಸೂಚನೆಯಂತೆ ರಾಜ್ಯ ಸರ್ಕಾರ ಇಂದು ತನ್ನ ಪ್ರತಿನಿಧಿಯನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಸದ್ಯ ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿರುವ ರಾಕೇಶ್ ಸಿಂಗ್ ಅವರಿಗೆ ರಾಜ್ಯದ ಪ್ರತಿನಿಧಿಯಾಗಿ ಕೆಲಸ ಮಾಡುವ ಹೊಣೆಗಾರಿಕೆಯನ್ನು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ನೀಡಿದೆ.
Related Articles
Thank you for your comment. It is awaiting moderation.


Comments (0)