ಮೇಕೆದಾಟು ಯೋಜನೆಗೆ ತಮಿಳುನಾಡು,ಕೇಂದ್ರ ಸರ್ಕಾರದ ತಕರಾರು ಸಲ್ಲದು; ಸಿಎಂ ಸಿದ್ದರಾಮಯ್ಯ
- September 13, 2025
- 0 Likes
ಬೆಂಗಳೂರು: ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸ್ಯಾಂಡಲ್ ವುಡ್ಗೆ ಬಿಗ್ ಶಾಕ್ ನೀಡಿದ್ದಾರೆ. ಚಿತ್ರರಂಗದ ಗಣ್ಯಾತೀಗಣ್ಯ ನಟರು, ನಿರ್ಮಾಪಕರ ಮನೆ ಮೇಲೆ ದಾಳಿ ನಡೆಸಿ ಹಲವು ದಾಖಲೆಗಳು ಮತ್ತು ಚಿನ್ನಾಭರಣಗಳನ್ನು ವಶಪಡಿಕೊಂಡಿದ್ದಾರೆ.
ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್, ಶಿವರಾಜ್ ಕುಮಾರ್, ಸುದೀಪ್, ಯಶ್, ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್, ವಿಜಯ್ ಕಿರಗಂದೂರು, ನಿರ್ಮಾಪಕ ಸಿ.ಆರ್.ಮನೋಹರ್ ಮನೆ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸುಮಾರು 200 ಅಧಿಕಾರಿಗಳು 8 ಅಧಿಕಾರಗಳ ತಂಡ ಮಾಡಿಕೊಂಡು ಬೆಳ್ಳಂಬೆಳಗ್ಗೆ 50 ಕ್ಕೂ ಹೆಚ್ಚುಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಸ್ಯಾಂಡಲ್ವುಡ್ನಲ್ಲಿ ಬ್ಲ್ಯಾಕ್ಮನಿ ವಹಿವಾಟು ಹೆಚ್ಚಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸ್ಯಾಂಡಲ್ವುಡ್ ನಟರು ಮತ್ತು ನಿರ್ಮಾಪಕರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.
Comments (0)