ಸಿದ್ಧಗಂಗಾ ಶ್ರೀಗಳ ಹುಟ್ಟೂರು ದತ್ತು: ಸಚಿವ ಡಿ.ಕೆ.ಶಿವಕುಮಾರ್ ಘೋಷಣೆ
- by Suddi Team
- January 22, 2019
- 167 Views
ತುಮಕೂರು: ಭಕ್ತರ ಪಾಲಿನ ನಡೆದಾಡುವ ದೇವರು ಸಿದ್ದಗಂಗಾ ಮಠದ ಶ್ರೀಗಳಾದ ಡಾ. ಶಿವಕುಮಾರ ಸ್ವಾಮೀಜಿ ಅವರ ಹುಟ್ಟೂರು ವೀರಾಪುರ ಗ್ರಾಮವನ್ನು ದತ್ತು ತೆಗೆದುಕೊಳ್ಳುವುದಾಗಿ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸೋಮವಾರ ಲಿಂಗೈಕ್ಯರಾದ ಸ್ವಾಮೀಜಿಗಳ ದರ್ಶನದ ನಂತರ ಸಚಿವರು ಈ ಮಾಹಿತಿ ನೀಡಿದ್ದಾರೆ.
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ವೀರಾಪುರ ಗ್ರಾಮವನ್ನು ದತ್ತು ತೆಗೆದುಕೊಂಡು, ಮಾದರಿ ಗ್ರಾಮವಾಗಿ ಅಭಿವೃದ್ಧಿ ಮಾಡಲಾಗುವುದು ಎಂದು ರಾಮನಗರ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಸಚಿವರು ಹೇಳಿದ್ದಾರೆ.
Related Articles
Thank you for your comment. It is awaiting moderation.


Comments (0)