ಮೇಕೆದಾಟು ಯೋಜನೆಗೆ ತಮಿಳುನಾಡು,ಕೇಂದ್ರ ಸರ್ಕಾರದ ತಕರಾರು ಸಲ್ಲದು; ಸಿಎಂ ಸಿದ್ದರಾಮಯ್ಯ
- September 13, 2025
- 0 Likes
ಮಂಗಳೂರು: ದುಷ್ಕರ್ಮಿಗಳ ತಂಡವೊಂದು ಯುವಕರ ಮೇಲೆ ತಲ್ವಾರು ದಾಳಿ ನಡೆಸಿದ ಘಟನೆ ನಗರದ ಬಂದರು ಬಜಿಲಕೇರಿಯಲ್ಲಿ ನಡೆದಿದೆ. ಈ ವೇಳೆ ಗಾಂಜಾ ವ್ಯಸನಿ ಯುವಕನೊಬ್ಬ ನಡು ರಸ್ತೆಯಲ್ಲೇ ತಲ್ವಾರು ಜಳಪಿಸಿ ಭಯದ ವಾತಾವರಣ ಸೃಷ್ಟಿಸಿದ್ದಾನೆ. ಘರ್ಷಣೆ ವೇಳೆ ಮೂರು ಮಂದಿ ಯುವಕರು ಗಾಯಗೊಂಡಿದ್ದಾರೆ.
ಅಲ್ಲದೆ ಇದೇ ತಂಡದ ಮನೆಗೆ ನುಗ್ಗಿ ಕುಟುಂಬಸ್ಥರ ಮೇಲೆ ಹಲ್ಲೆ ಮಾಡಿ ಮನೆಯ ವಸ್ತುಗಳನ್ನು ಪುಡಿಗೈದಿರುವ ಆರೋಪ ಕೇಳಿಬಂದಿದೆ. ಘಟನೆಯಲ್ಲಿ ಒಂದು ಕಾರು ಹಾಗೂ ಬೈಕ್ ಜಖಂಗೊಂಡಿದೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದು ಹಲ್ಲೆ ನಡೆದಿದೆ. ಹೀಗಾಗಿ
ಬಜಿಲಕೇರಿ ಪರಿಸರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಪ್ರಕರಣ ಕುರಿತು ಬಂದರು ಠಾಣೆಯಲ್ಲಿ ಕೇಸು ದಾಖಲಾಗಿದೆ. ಇನ್ನು ಘಟನೆ ಬಗ್ಗೆ ಮಾಹಿತಿ ಪಡೆದ ಶಾಸಕ ವೇದವ್ಯಾಸ್ ಕಾಮತ್ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.
Comments (0)