ಲಾಕ್ ಡೌನ್ ಗೆ ಸಿಲಿಕಾನ್ ಸಿಟಿ ಸ್ತಬ್ಧ
- by Suddi Team
- July 15, 2020
- 48 Views

ಬೆಂಗಳೂರು: ಮೊದಲ ದಿನದ ಲಾಕ್ ಡೌನ್ ಗೆ ಸಿಲಿಕಾನ್ ಸಿಟಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಇಡೀ ನಗರ ಸ್ಥಬ್ಧಗೊಂಡಿದೆ.ಅಗತ್ಯ ಸೇವೆ ಹೊರತುಪಡಿಸಿ ಉಳಿದೆಲ್ಲಾ ಸಂಪೂರ್ಣವಾಗಿ ಬಂದ್ ಆಗಿದೆ.
ಬೆಂಗಳೂರಿನಲ್ಲಿ ಆರಂಭಗೊಂಡ ಒಂದ ವಾರದ ಲಾಕ್ ಡೌನ್ ಹಿನ್ನಲೆಯಲ್ಲಿ ಸಾರ್ವಜನಿಕ ಸಂಚಾರ ವ್ಯವಸ್ಥೆ ಸಂಪೂರ್ಣ ಬಂದ್ ಆಗಿದೆ.ತುರ್ತು ಸೇವೆ ಹೊರತುಪಡಿಸಿ ಬಸ್ ಗಳ ಸಂಚಾರ ಸ್ಥಗಿತವಾಗಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣ ಖಾಲಿ ಖಾಲಿಯಾಗಿದ್ದು ಬಿಎಂಟಿಸಿ,ಕೆಎಸ್ಆರ್ಟಿಸಿ ಬಸ್ ಗಳ ಸಂಚಾರ, ಆಟೋ,ಕ್ಯಾಬ್ ಸೇವೆಯೂ ಸ್ಥಗಿತವಾಗಿದೆ.ಪೂರ್ವನಿಗದಿತ ರೈಲುಗಳ ಸಂಚಾರ ಮಾತ್ರ ಟಿಕೆಟ್ ಕಾಯ್ದಿರಿಸಿದ್ದವರಿಗೆ ಅವಕಾಶ ಕಲ್ಪಿಸಲಾಗಿದೆ.
ಇನ್ನು ಮಧ್ಯಾಹ್ನ 12 ಗಂಟೆವರೆಗೂ ಹಾಲು, ದಿನಸಿ, ತರಕಾರಿ ವ್ಯಾಪಾರಿಗಳಿಗೆ ಅವಕಾಶ ನೀಡಿದ್ದು ಮಧ್ಯಾಹ್ನದ ನಂತರ ಅವೂ ಬಂದ್ ಆಗಿವೆ. ಇಡೀ ನಗರವೇ ಬಂದ್ ಆಗಿದ್ದು ಎಲ್ಲಾ ಕಡೆ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.ಫ್ಲೈ ಓವರ್ ಗಳನ್ನು ಬಂದ್ ಮಾಡಲಾಗಿದೆ. ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗುತ್ತಿದೆ. ಇಡೀ ನಗರದಲ್ಲಿ ಪೊಲೀಸ್ ಗಸ್ತು ಹೆಚ್ಚಿಸಲಾಗಿದೆ.
Related Articles
Thank you for your comment. It is awaiting moderation.
Comments (0)