ಸರಕಾರದ ಒಂದು ವರ್ಷದ ಪ್ರಧಾನ ಸಮಾರಂಭದ ನೇರ ಪ್ರಸಾರ ವೀಕ್ಷಣೆ, ಡಿಸಿಎಂ ಅವರಿಂದ ಕಿರು ಹೊತ್ತಿಗೆ ಬಿಡುಗಡೆ
- by Suddi Team
- July 27, 2020
- 18 Views

ಬಾಗಲಕೋಟೆ : ಸರಕಾರದ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಸೋಮವಾರ ಬೆಂಗಳೂರು ವಿಧಾಸೌಧದಲ್ಲಿ ಬ್ಯಾಂಕ್ವೆಟ್ ಹಾಲ್ ನಲ್ಲಿ ಜರಗಿದ ಸರಕಾರದ ಒಂದು ವರ್ಷದ ಪ್ರಧಾನ ಸಮಾರಂಭದ ನೇರ ಪ್ರಸಾರವನ್ನು ಬಾಗಲಕೋಟೆ ಜಿಲ್ಲಾಡಳಿತ ಭವನದಲ್ಲಿರುವ ಆಡಿಟೋರಿಯಂ ಹಾಲ್‌ನಲ್ಲಿ ಉಪ ಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು , ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ವೀಕ್ಷಿಸಿದರು.
ಇದೇ ಸಂದರ್ಭದಲ್ಲಿ ವಾರ್ತಾ ಇಲಾಖೆ ಹೊರತಂದ ಕಿರು ಹೊತ್ತಿಗೆಯನ್ನು ಉಪ ಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಬಿಡುಗಡೆ ಮಾಡಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ಶಾಸಕರಾದ ವೀರಣ್ಣ ಚರಂತಿಮಠ, ಸಿದ್ದು ಸವದಿ, ವಿಧಾನ ಪರಿಷತ್ ಸದಸ್ಯ ಹನಮಂತ ನಿರಾಣಿ, ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ, ಎಸ್.ಪಿ ಲೋಕೇಶ ಜಗಲಾಸರ, ಜಿ.ಪಂ ಸಿಇಓ ಟಿ.ಭೂಬಾಲನ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Related Articles
Thank you for your comment. It is awaiting moderation.
Comments (0)