ಮಳೆ ಪರಿಸ್ಥಿತಿ ನಿಭಾಯಿಸುತ್ತೇವೆ:ಡಿಸಿಎಂ ಡಿಕೆ ಶಿವಕುಮಾರ್
- by Suddi Team
- May 17, 2025
- 101 Views
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮಳೆ ಪರಿಸ್ಥಿತಿ ನಿಭಾಯಿಸುತ್ತೇವೆ, ನಮ್ಮ ಅಧಿಕಾರಿಗಳ ತಂಡ ಹಗಲಿರುಳು ಕೆಲಸ ಮಾಡಲು ಸಜ್ಜಾಗಿದೆ,ನಾನು ಕೂಡ ವಾರ್ ರೂಂಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬೆಂಗಳೂರಿನಲ್ಲಿ ಮಳೆಯಿಂದ ಎಲ್ಲೆಲ್ಲಿ ಏನಾಗಿದೆ ಎಂದು ನಮ್ಮ ಅಧಿಕಾರಿಗಳ ತಂಡ ಮಾಹಿತಿ ಕಲೆಹಾಕುತ್ತಿದೆ. ನಗರದಲ್ಲಿ ಮಳೆಯ ಪರಿಸ್ಥಿತಿಯನ್ನು ನಿಭಾಯಿಸುತ್ತೇವೆ” ಎಂದು ಹೇಳಿದರು.
ಕೊತ್ತನೂರು ಮಂಜುನಾಥ್ ಕರೆದು ಮಾತಾಡುವೆ:
ಕೊತ್ತನೂರು ಮಂಜುನಾಥ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ಇಡೀ ಪಕ್ಷ ಸೈನಿಕರ ಪರವಾಗಿದೆ. ಶಾಸಕರನ್ನು ಕರೆದು ಈ ವಿಚಾರವಾಗಿ ಮಾತನಾಡುತ್ತೇನೆ” ಎಂದು ಹೇಳಿದರು.
ಹೋಟೆಲ್ ನಲ್ಲಿ ಕನ್ನಡಿಗರ ವಿರುದ್ಧ ಬೋರ್ಡ್ ಹಾಕಿರುವ ಬಗ್ಗೆ ಕೇಳಿದಾಗ, “ಇಂತಹ ಪ್ರಕರಣಗಳಲ್ಲಿ ನಾವು ಕ್ರಮ ಕೈಗೊಳ್ಳುತ್ತೇವೆ. ಕನ್ನಡದ ವಿಚಾರವಾಗಿ ನಮ್ಮ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಈ ಹಿಂದೆ ಯಾರೂ ಮಾಡಿಲ್ಲ, ಮುಂದೆಯೂ ಮಾಡಲು ಸಾಧ್ಯವಿಲ್ಲ. ಕನ್ನಡ ನೆಲ, ಜಲ, ಭಾಷೆ ರಕ್ಷಣೆಗೆ ನಾವು ಅಗತ್ಯ ಕ್ರಮ ಕೈಗೊಳ್ಳುತ್ತೇವೆ” ಎಂದರು.
Related Articles
Thank you for your comment. It is awaiting moderation.


Comments (0)