ಕನ್ನಡ ನಾಡು – ನುಡಿಯ ಅಭಿವೃದ್ಧಿಗೆ ಯಾವುದೇ ಕಾರಣಕ್ಕೂ ಅನುದಾನವಿಲ್ಲ ಎಂದು ಹೇಳುವುದಿಲ್ಲ: ಸಿಎಂ

ಚಿಕ್ಕಬಳ್ಳಾಪುರ:ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಗತ್ಯವಿದ್ದಷ್ಟು ಅನುದಾನ ಒದಗಿಸಲಾಗುವುದು. ಕನ್ನಡ ನಾಡು – ನುಡಿಯ ಅಭಿವೃದ್ಧಿಗೆ ಯಾವುದೇ ಕಾರಣಕ್ಕೂ ಅನುದಾನವಿಲ್ಲ ಎಂದು ಹೇಳುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಗೌರಿಬಿದನೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ವಿಧಾನ ಪರಿಷತ್ ಸದಸ್ಯರ ನಾಮ ನಿರ್ದೇಶನದ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಈ ವಿಚಾರದ ಬಗ್ಗೆ ಚರ್ಚೆ ಮಾಡಬೇಕಿದ್ದು, ಅದನ್ನು ಮುಂದಕ್ಕೆ ಹಾಕಿದ್ದೇವೆ ಅಷ್ಟೆ ಎಂದರು.

ಬೆಳಗಾವಿಯಲ್ಲಿ ಮಾತ್ರ ಹೊಸ ಜಿಲ್ಲೆ ರಚಿಸುವ ಬಗ್ಗೆ ಬೇಡಿಕೆ ಇದ್ದು, ಇದಕ್ಕೆ ಸಂಬಂಧಿಸಿದಂತೆ ಶಾಸಕರು, ಸಚಿವರು ಮತ್ತು ಸಂಸದರ ಜೊತೆ ಸಭೆ ನಡೆಸಿ, ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ನಂದಿ ಬೆಟ್ಟದಲ್ಲಿ ಬೆಂಗಳೂರು ವಿಭಾಗಕ್ಕೆ ಸಂಬಂಧಿಸಿದಂತೆ 19ರಂದು ಸಚಿವ ಸಂಪುಟ ನಡೆಯುತ್ತಿದೆ. ಅಲ್ಲಿ ಪ್ರಸ್ತಾಪವಾಗುವ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದರು.

ಆಂಧ್ರದಲ್ಲಿ ತೋತಾಪುರಿ ಮಾವಿಗೆ ಒಂದು ಕೆಜಿ ಗೆ 4 ರೂ. ಬೆಂಬಲ ಬೆಲೆ ನೀಡಲಾಗುತ್ತಿದ್ದು, ಇಲ್ಲಿಯೂ ಕೊಡಬೇಕು ಎನ್ನುವ ಬೇಡಿಕೆಯನ್ನು ಸಚಿವ ಎಂ.ಸಿ.ಸುಧಾಕರ್ ಅವರು ಮಾಡಿದ್ದಾರೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗುವುದು ಎಂದರು.

Related Articles

Comments (0)

Leave a Comment