ವಿಧಾನಸೌಧದಲ್ಲಿ ನಡೆದ RCB ಆಟಗಾರರ ಸನ್ಮಾನ ಸಮಾರಂಭಕ್ಕೆ ರಾಜ್ಯಪಾಲರನ್ನು ನಾನೇ ಆಹ್ವಾನಿಸಿದ್ದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- by Suddi Team
- June 11, 2025
- 109 Views
ಚಿಕ್ಕಬಳ್ಳಾಪುರ: ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡ ಆರ್.ಸಿ.ಬಿ ಆಟಗಾರರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮಕ್ಕೆ ರಾಜ್ಯಪಾಲರು ಅವರಾಗೇ ಬರಲಿಲ್ಲ, ನಾನೇ ಆಹ್ವಾನಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.
ಗೌರಿಬಿದನೂರಿನಲಗಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಜೂನ್ 4 ರಂದು ಕರ್ನಾಟಕ ಕ್ರಿಕೆಟ್ ಸಂಸ್ಥೆ ಹಾಗೂ ಆರ್.ಸಿ. ಬಿ ಯ ವತಿಯಿಂದ ಆರ್.ಸಿ. ಬಿ ಆಟಗಾರರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ನನಗೆ ಅಂದು ಬೆಳಿಗ್ಗೆ 11.29 ನಿಮಿಷಕ್ಕೆ ಕೆ.ಎಸ್.ಸಿ.ಎ ವತಿಯಿಂದ ಶಂಕರ್ ಮತ್ತು ಜಯರಾಮ್ ಅವರು ಆಹ್ವಾನ ನೀಡಿ ಮನವಿ ಮಾಡಿಕೊಂಡರು.ಇದಕ್ಕೆ ನಾನು ಒಪ್ಪಿಗೆ ನೀಡಿದೆ. ಬಳಿಕ ಅವರು ರಾಜ್ಯಪಾಲರನ್ನು ಆಹ್ವಾನ ಮಾಡಿರುವುದಾಗಿ ತಿಳಿಸಿದರು. ಪತ್ರಿಕೆಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ರಾಜ್ಯಪಾಲರು ಅವರಾಗಿಯೇ ಬಂದಿದ್ದರು ಎಂದು ಪ್ರಾಚಾರವಾಗಿದ್ದು ಅದು ತಪ್ಪು ಎಂದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿದ್ದ ಗೋವಿಂದರಾಜು ಅವರು ರಾಜ್ಯಪಾಲರಿಗೆ ಕರೆ ಮಾಡಿ ಫೋನ್ ನನಗೆ ಕೊಟ್ಟರು. ಆಗ ನಾನು ಕೂಡ ಕಾರ್ಯಕ್ರಮಕ್ಕೆ ತೆರಳುತ್ತಿದ್ದು ನೀವು ಬನ್ನಿ ಎಂದು ಆಹ್ವಾನಿಸಿದೆ. ರಾಜ್ಯಪಾಲರು ಕೂಡ ಕಾರ್ಯಕ್ರಮಕ್ಕೆ ಆಗಮಿಸಿದರು. ಕಾರ್ಯಕ್ರಮ 20 ನಿಮಿಷಗಳಲ್ಲಿ ಮುಗಿದುಹೋಯಿತು,ಮಾಧ್ಯಮಗಳು ಹಾಗೂ ಸುದ್ದಿ ವಾಹಿನಿಗಳಲ್ಲಿ ರಾಜ್ಯಪಾಲರು ತಾವಾಗಿಯೇ ಬಂದಿದ್ದಾರೆ ಎಂದು ವರದಿಯಾದ್ದರಿಂದ ಸ್ಪಷ್ಟೀಕರಣ ನೀಡುತ್ತಿದ್ದೇನೆ ಎಂದರು.
ಪರಿಹಾರ ನೀಡಲಾಗಿದೆ:
ಕಾಲ್ತುಳಿತದಲ್ಲಿ ಮಾಡಿದವರ ಕುಟುಂಬಕ್ಕೆ ತಲಾ 25 ಲಕ್ಷ ರೂ.ಗಳನ್ನೂ ಈಗಾಗಲೇ ಪಾವತಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
Related Articles
Thank you for your comment. It is awaiting moderation.


Comments (0)