ಗೃಹ ಆರೋಗ್ಯ ಯೋಜನೆಯಡಿ 185 ಕೋಟಿ ರೂ. ಅನುದಾನ ಬಳಕೆಗೆ ಅನುಮೋದನೆ
- by Suddi Team
- June 13, 2025
- 101 Views
ಬೆಂಗಳೂರು: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ‘ಗೃಹ ಆರೋಗ್ಯ’ ಯೋಜನೆ ಅನುಷ್ಠಾನಕ್ಕೆ ಅಗತ್ಯವಿರುವ ಔಷಧಿ, ಉಪಕರಣಗಳಿಗಾಗಿ 185 ಕೋಟಿ ಅನುದಾನ ಬಳಕೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
ಕೋಲಾರ ಜಿಲ್ಲೆಯಲ್ಲಿ ಯೋಜನೆ ಯಶಸ್ವಿಯಾದ ಬೆನ್ನಲ್ಲೇ, ರಾಜ್ಯಾದ್ಯಂತ ಯೋಜನೆ ಜಾರಿಯಾಗುತ್ತಿದ್ದು, ಈ ತಿಂಗಳ ಅಂತ್ಯದೊಳಗೆ ಜಿಲ್ಲೆಗಳಲ್ಲಿ ತಪಾಸಣಾ ಕಾರ್ಯ ಆರಂಭವಾಗಲಿದೆ.
ಆಶಾ ಕಾರ್ಯಕರ್ತೆಯರು ಮನೆ, ಮನೆಗೆ ತೆರಳಿ ಅಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ 30 ವರ್ಷ ಮೇಲ್ಪಟ್ಟವರು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ತಪಾಸಣೆಗೆ ಒಳಪಡಲು ನೆರವಾಗಲಿದ್ದಾರೆ.
ರಕ್ತದೊತ್ತಡ, ಡಯಾಬಿಟಿಸ್, ಕ್ಯಾನ್ಸರ್ ಸೇರಿದಂತೆ 14 ಅಸಾಂಕ್ರಾಮಿಕ ರೋಗಗಳ ತಪಾಸಣೆಯನ್ನು ಸಮುದಾಯ ಆರೋಗ್ಯ ಅಧಿಕಾರಿಗಳು ನಡೆಸಲಿದ್ದಾರೆ.
ರೋಗಗಳಿಗೆ ತುತ್ತಾದವರಿಗೆ, ಅವರ ಬಳಿಗೆ ಉಚಿತವಾಗಿ ಔಷಧಗಳನ್ನು ಒದಗಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಗ್ರಾಮೀಣ ಪ್ರದೇಶದ ಜನರ ಆರೋಗ್ಯ ರಕ್ಷಣೆಯಲ್ಲಿ ಒಂದು ದೂರದೃಷ್ಟಿಯ ಯೋಜನೆಯಾಗಿರುವ ‘ಗೃಹ ಆರೋಗ್ಯ’ , ಮುಂಬರುವ ವರ್ಷಗಳಲ್ಲಿ ಹಲವರ ಜೀವ ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ.
Related Articles
Thank you for your comment. It is awaiting moderation.


Comments (0)