ಬಿನ್ನಿಪೇಟೆ ವಾರ್ಡ್ ಉಪಚುನಾವಣೆ: ಮತದಾನ ಆರಂಭ
- by Suddi Team
 - June 18, 2018
 - 81 Views
 
ಬೆಂಗಳೂರು:ಜೆಡಿಎಸ್ ಕಾರ್ಪೊರೇಟರ್ ಮಹದೇವಮ್ಮ ನಿಧನದಿಂದ ತೆರವಾಗಿದ್ದ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಬಿನ್ನಿಪೇಟೆ ವಾರ್ಡ್ ನ ಉಪ ಚುನಾವಣೆಗೆ ಮತದಾನ ಆರಂಭಗೊಂಡಿದೆ. 7 ಗಂಟೆಗೆ ಆರಂಭವಾಗಲಿರುವ ಮತದಾನ ಪ್ರಕ್ರಿಯೆ ಸಂಜೆ 5 ಗಂಟೆವರೆಗೆ ನಡೆಯಲಿದೆ.
ಮುಂಜಾನೆಯಿಂದಲೇ ಬಿರುಸಿನ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು,ಜನ ಸರದಿ ಸಾಲಿನಲ್ಲಿ ನಿಂತು ಮತ ಚಲಾವಣೆ ಮಾಡುತ್ತಿದ್ದಾರೆ.
30 ಸಾಮಾನ್ಯ ಮತ್ತು 7 ಸೂಕ್ಷ್ಮ ಮತಗಟ್ಟೆಗಳು ಸೇರಿ ಒಟ್ಟು
37 ಮತಗಟ್ಟೆಗಳ ವ್ಯವಸ್ಥೆ ಕಲ್ಪಿಸಿದ್ದು,17746 ಪುರುಷ ಮತ್ತು 16826 ಮಹಿಳಾ ಮತದಾರರು ಒಟ್ಟು 34582 ಮತದಾರರು ಮತ ಚಲಾವಣೆ ಮಾಡಲಿದ್ದಾರೆ.
ಪಾಲಿಕೆಯಲ್ಲಿ ದೋಸ್ತಿ,ರಾಜ್ಯ ಸರ್ಕಾರದಲ್ಲಿ ದೋಸ್ತಿ ಇದ್ದರು ಕಾಂಗ್ರೆಸ್ ಹಾಗು ಜೆಡಿಎಸ್ ಪ್ರತ್ಯೇಕ ಅಭ್ಯರ್ಥಿ ಕಣಕ್ಕಿಳಿಸಿದ್ದು ಬಿಜೆಪಿ ಕೂಡ ಪೈಪೋಟಿ ನೀಡುತ್ತಿದೆ.ಮೂರುಬೊಕ್ಷದ ನಡುವೆ ತ್ರಿಕೋನ ಸ್ಪರ್ಧೆ ಕಂಡಬಂದಿದೆ. ಸ್ಥಾನ ಉಳಿಸಿಕೊಳ್ಳಲು ಜೆಡಿಎಸ್ ಯತ್ನಿಸುತ್ತಿದ್ದರೆ,ಸ್ಥಾನ ಹೆಚ್ಚಿಸಿಕೊಳ್ಳಲು ಕಾಂಗ್ರೆಸ್ ಮತ್ತು ವಾರ್ಡ್ ಅನ್ನು ಗೆಲ್ಲುವ ಮೂಲಕ ಪಾಲಿಕೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಅಪವಿತ್ರ ಮೈತ್ರಿ ಎಂದು ಮತ್ತೊಮ್ಮೆ ಬಿಂಬಿಸಲು ಬಿಜೆಪಿ ಯತ್ನಿಸುತ್ತಿದೆ.
ಕಾಂಗ್ರೆಸ್ ನಿಂದ ವಿದ್ಯಾ ಶಶಿಕುಮಾರ್ ಜೆಡಿಎಸ್ ನಿಂದ ಮಹದೇವಮ್ಮ ಪುತ್ರಿ ಐಶ್ವರ್ಯಾ ಬಿಜೆಪಿಯಿಂದ ಜಿ. ಚಾಮುಂಡೇಶ್ವರಿ ಕಣಕ್ಕಿಳಿದಿದ್ದು ಈ ಅಭ್ಯರ್ಥಿಗಳ ಭವಿಷ್ಯ ಇಂದು ಸಂಜೆ ಮತಯಂತ್ರದಲ್ಲಿ ಭದ್ರವಾಗಲಿದೆ.ಜೂನ್ 20 ರಂದು ಫಲಿತಾಂಶ ಹೊರಬೀಳಲಿದೆ.
Related Articles
                            Thank you for your comment. It is awaiting moderation.
                        
                                        
                    
                    
                
                            
                                            
                                                                                                                                                    
                                                                                                                                                    
                                                                                                                                                    
                                                                                                                                                    
                                                                                                                                                    
                                                                                                                                                    
Comments (0)