ವ್ಯಾಪಕ ಮಳೆ: ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
- by Suddi Team
- June 16, 2025
- 70 Views
ಉಡುಪಿ: ಕರಾವಳಿಯಾದ್ಯಂತ ಮುಂಗಾರ ಅಬ್ಬರ ಮುಂದುವರೆದಿದ್ದು, ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆಯಿಂದಾಗಿ ರೆಡ್ ಅಲರ್ಟ್ ಘೋಷಣೆಯಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆ ,ಪದವಿಪೂರ್ವ ಜಾಲೇಜು ಹಾಗು ಐಟಿಐ ಕಾಲೇಜುಗಳಿಗೆ ಜೂನ್ 17 ರಂದು ರಜೆ ಘೋಷಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಬೆನ್ನಲ್ಲೇ ಎಚ್ಚರಿಕೆ ವಹಿಸೊರುವ ಜಿಲ್ಲಾಡಳಿತ ಮುನ್ನೆಚ್ಚರಿಕೆಯ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪಿಯುಸಿ, ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಿದೆ, ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ರಜೆ ನೀಡಿ ಆದೇಶ ನೀಡಿದ್ದಾರೆ.
ದಕ್ಷಿಣ ಕನ್ನಡ, ಕೊಡಗು,ಚಿಕ್ಕಮಗಳೂರು,ಶಿವಮೊಗ್ಗ ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆಯಾಗುತ್ತಿದೆ. ಎಡೆಬಿಡದೆ ಮಳೆ ಸುರಿಯುತ್ತಿದೆ ಪರಿಸ್ಥಿತಿ ನೋಡಿಕೊಂಡು ರಜೆ ನೀಡುವ ತೀರ್ಮಾನ ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸರ್ಕಾರ ಸೂಚನೆ ನೀಡಿದ್ದು ಅದರಂತೆ ಪರಿಸ್ಥಿತಿ ಅವಲೋಕಿಸಿ ಎಲ್ಲಿ ರಜೆ ನೀಡಬೇಕು ಎನ್ನುವ ನಿರ್ಧಾರ ಕೈಗೊಳ್ಳಲಾಗುತ್ತದೆ.
Related Articles
Thank you for your comment. It is awaiting moderation.


Comments (0)