ಮಿರಜ್ – ಬೆಳಗಾವಿ ವಿಶೇಷ ರೈಲುಗಳ ಆಗಮನದ ವೇಳೆಯಲ್ಲಿ ಪರಿಷ್ಕರಣೆ
- by Suddi Team
- June 18, 2025
- 75 Views

ಹುಬ್ಬಳ್ಳಿ: ನೈಋತ್ಯ ರೈಲ್ವೆಯು ರೈಲು ಸಂಖ್ಯೆ 07302 ಮಿರಜ್-ಬೆಳಗಾವಿ ಕಾಯ್ದಿರಿಸದ ವಿಶೇಷ ಮತ್ತು ರೈಲು ಸಂಖ್ಯೆ 07304 ಮಿರಜ್-ಬೆಳಗಾವಿ ಕಾಯ್ದಿರಿಸದ ವಿಶೇಷ ರೈಲುಗಳ ಬೆಳಗಾವಿ ನಿಲ್ದಾಣಕ್ಕೆ ಆಗಮನದ ಸಮಯವನ್ನು ಪ್ರಸಕ್ತ ಸಾಲಿನ ಜೂನ್ 19 ರಿಂದ ಪರಿಷ್ಕರಿಸಿದೆ.
ಪರಿಷ್ಕರಣೆಯಂತೆ ರೈಲು ಸಂಖ್ಯೆ 07302 ಮಿರಜ್ – ಬೆಳಗಾವಿ ಕಾಯ್ದಿರಿಸದ ವಿಶೇಷ ರೈಲು ಬೆಳಗಾವಿಗೆ ಆಗಮಿಸುವ ಸಮಯವನ್ನು ಈಗಿರುವ 12:50 ಗಂಟೆಗಳಿಂದ 13:00 ಗಂಟೆಗಳಿಗೆ ಪರಿಷ್ಕರಿಸಲಾಗಿದೆ. ಅದೇ ರೀತಿ, ರೈಲು ಸಂಖ್ಯೆ 07304 ಮಿರಜ್ – ಬೆಳಗಾವಿ ಕಾಯ್ದಿರಿಸದ ವಿಶೇಷ ರೈಲಿನ ಆಗಮನದ ಸಮಯವನ್ನು ಬೆಳಗಾವಿ ನಿಲ್ದಾಣದಲ್ಲಿ 20:35 ಗಂಟೆಗಳಿಂದ 21:00 ಗಂಟೆಗಳಿಗೆ ಪರಿಷ್ಕರಿಸಲಾಗಿದೆ.ಈ ಎರಡೂ ರೈಲುಗಳ ಮಿರಜ್ ಮತ್ತು ಸಾಂಬ್ರಾ ನಿಲ್ದಾಣಗಳ ನಡುವಿನ ಸಮಯಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಬೆಲ್ಲಂಪಲ್ಲಿಯಲ್ಲಿ ರೈಲುಗಳ ನಿಲುಗಡೆ ರದ್ದು:
ಸಿಕಂದರಾಬಾದ್ ವಿಭಾಗದ ಬಲ್ಹರ್ಷಾ-ಕಾಜಿಪೇಟೆ ವಿಭಾಗದಲ್ಲಿ ರೆಚ್ನಿ ರೋಡ್ ಮತ್ತು ಬೆಲ್ಲಂಪಲ್ಲಿ ನಿಲ್ದಾಣಗಳ ನಡುವಿನ ಹೊಸ ಮೂರನೇ ಮಾರ್ಗದ ಕಾರ್ಯಾರಂಭಕ್ಕೆ ಸಂಬಂಧಿಸಿದಂತೆ, ಬೆಲ್ಲಂಪಲ್ಲಿ ಯಾರ್ಡ್‌ನಲ್ಲಿ ಎಂಜಿನಿಯರಿಂಗ್ ಕೆಲಸಗಳ ಕಾರಣದಿಂದಾಗಿ ಎರಡು ರೈಲುಗಳಿಗೆ ಬೆಲ್ಲಂಪಲ್ಲಿಯಲ್ಲಿ ನಿಲುಗಡೆ ರದ್ದುಪಡಿಸುವುದಾಗಿ ದಕ್ಷಿಣ ಮಧ್ಯ ರೈಲ್ವೆಯು ತಿಳಿಸಿದೆ.
ಜೂನ್ 21 ರಂದು ಹುಬ್ಬಳ್ಳಿಯಿಂದ ಪ್ರಾರಂಭವಾಗುವ ರೈಲು ಸಂಖ್ಯೆ 07323 ಎಸ್‌ಎಸ್‌ಎಸ್ ಹುಬ್ಬಳ್ಳಿ – ಬನಾರಸ್ ವೀಕ್ಲಿ ಎಕ್ಸ್‌ಪ್ರೆಸ್ ವಿಶೇಷ ರೈಲು ಬೆಲ್ಲಂಪಲ್ಲಿಯಲ್ಲಿ ನಿಲ್ಲುವುದಿಲ್ಲ. ಪರ್ಯಾಯವಾಗಿ, ಈ ರೈಲು ಸಿರ್‌ಪುರ್ ಕಾಗಜ್‌ನಗರದಲ್ಲಿ ನಿಲುಗಡೆಯನ್ನು ಒದಗಿಸಲಿದೆ.ಜೂನ್ 21 ರಂದು ಮೈಸೂರಿನಿಂದ ಪ್ರಾರಂಭವಾಗುವ ರೈಲು ಸಂಖ್ಯೆ 12975 ಮೈಸೂರು – ಜೈಪುರ ದ್ವಿ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಬೆಲ್ಲಂಪಲ್ಲಿಯಲ್ಲಿ ನಿಗದಿತ ನಿಲುಗಡೆಯನ್ನು ಸಹ ಇರುವುದಿಲ್ಲ ಎಂದು ನೈಋತ್ಯ ರೈಲ್ವೆ ತಿಳಿಸಿದೆ.
Related Articles
Thank you for your comment. It is awaiting moderation.
Comments (0)