ಓಲಾ, ಉಬರ್ ದುಬಾರಿ ದರ: ಅಸಹಾಯಕವಾಯ್ತಾ ಸರ್ಕಾರ..?
- by Suddi Team
- June 19, 2025
- 409 Views
ಬೆಂಗಳೂರು: ಓಲಾ, ಉಬರ್‌ನಂತಹ ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆ ಒದಗಿಸುವ ಸಂಸ್ಥೆಗಳ ದರ ನಿಯಂತ್ರಣಕ್ಕೆ ಸದ್ಯದ ಮಟ್ಟಿಗೆ ಸರ್ಕಾರ ಅಸಹಾಯಕವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವ ರಾಮಲಿಂಗಾರೆಡ್ಡಿ, ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆ ಒದಗಿಸುತ್ತಿರುವ ಓಲಾ, ಉಬರ್ ಟ್ಯಾಕ್ಸಿ ಮತ್ತು ಆಟೋಗಳಲ್ಲಿ ಹೆಚ್ಚಿನ ದರ ಪಡೆಯುತ್ತಿರುವ ಆರೋಪಗಳು ಕೇಳಿ ಬರುತ್ತಿವೆ. ಸಾಮಾನ್ಯ ಆಟೋ ಮತ್ತು ಟ್ಯಾಕ್ಸಿಗಳು ಪಡೆಯುವುದಕ್ಕಿಂತ ಹೆಚ್ಚಿನ ಹಣವನ್ನು ಇವರು ಪಡೆಯುತ್ತಿದ್ದಾರೆ ಎನ್ನುವ ಆರೋಪಗಳಿವೆ. ಆದರೆ, ಈಗಿರುವ ಪರಿಸ್ಥಿತಿಯಲ್ಲಿ ಅವರ ವಿರುದ್ಧ ಸರ್ಕಾರ ಯಾವುದೇ ಕ್ರಮ ಕೈಗೊಳ್ಳಲು ಅಸಹಾಯಕವಾಗಿದೆ ಎಂದು ಸ್ಪಷ್ಟಪಡಿಸಿದರು.
ಆಟೋ ಮತ್ತು ಟ್ಯಾಕ್ಸಿಗಳಿಗೆ ಸರ್ಕಾರವೇ ದರ ನಿಗದಿಪಡಿಸುತ್ತದೆ ಹಾಗೂ ದರ ನಿಯಂತ್ರಣ ಮಾಡುತ್ತದೆ. ಆದರೆ, ಆ್ಯಪ್ ಆಧಾರಿತ ಸೇವೆ ಒದಗಿಸುತ್ತಿರುವ ಓಲಾ, ಉಬರ್ ನಂತಹ ಸಂಸ್ಥೆಗಳು ಸರ್ಕಾರದ ನಿಯಂತ್ರಣದಲ್ಲಿಲ್ಲ. ದರ ನಿಗದಿ ಹಾಗೂ ಪರವಾನಗಿ ಸಂಬಂಧ ವ್ಯಾಜ್ಯ ಕೋರ್ಟ್‌ನಲ್ಲಿದೆ. ಈ ಸಂಸ್ಥೆಗಳು ಕೋರ್ಟ್‌ಗೆ ಹೋಗಿ ತಡೆಯಾಜ್ಞೆ ತಂದಿವೆ. ಆದ್ದರಿಂದ, ಸರ್ಕಾರ ಈ ವಿಚಾರದಲ್ಲಿ ಸದ್ಯಕ್ಕೆ ಯಾವ ಕ್ರಮಕ್ಕೂ ಮುಂದಾಗಲು ಸಾಧ್ಯವಿಲ್ಲ ಎಂದರು.
ಹೆಚ್ಚುವರಿ ಶುಲ್ಕ ಪಡೆಯುತ್ತಿರುವುದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದ್ದು, ಇದನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುತ್ತೇವೆ. ಕಾನೂನು ಹೋರಾಟದ ಮೂಲಕ ತಡೆಯಾಜ್ಞೆ ತೆರೆವುಗೊಳಿಸಿ ನಂತರ ಈ ಸಂಬಂಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
Related Articles
Thank you for your comment. It is awaiting moderation.


Comments (0)