ನಾಲ್ಕು ಹುಲಿ ಸಾವು; ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮಕ್ಕೆ ಅಶೋಕ್ ಆಗ್ರಹ
- by Suddi Team
- June 27, 2025
- 119 Views
ಬೆಂಗಳೂರು:ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀನ್ಯಂ ಅರಣ್ಯದಲ್ಲಿ 4 ಹುಲಿಗಳು ಮೃತಪಟ್ಟಿರುವ ವಿಷಯ ಅತ್ಯಂತ ಆಘಾತಕಾರಿಯಾಗಿದ್ದು ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ ಜರುಗಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಅವರು,ವನ್ಯಜೀವಿ ಸಂರಕ್ಷಣಾ ಕ್ಷೇತ್ರದಲ್ಲಿ ಇಡೀ ದೇಶದಲ್ಲಿ ತನ್ನದೇ ಆದ ಹೆಸರು ಮಾಡಿರುವ ಕರ್ನಾಟಕದಲ್ಲಿ ಇಂತಹ ಘಟನೆ ನಡೆದಿರುವುದು ರಾಜ್ಯಕ್ಕೆ ಕಳಂಕ ತಂದಿದೆ. ಮಲೈ ಮಹದೇಶ್ವರ ಕಾಡು ಹುಲಿ ಸಂತತಿ ಹೆಚ್ಚಳಕ್ಕೆ ಬೇಕಾದ ಎಲ್ಲಾ ಅಗತ್ಯ ವಾತಾವರಣವನ್ನು ಹೊಂದಿದೆ. ಆದರೆ ಅರಣ್ಯ ಇಲಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ಭ್ರಷ್ಟಾಚಾರ ನಮ್ಮ ವನ್ಯ ಸಂಪತ್ತನ್ನು ಹಾಳು ಮಾಡುತ್ತಿದೆ. ಪರಿಸ್ಥಿತಿ ಹೀಗೇ ಮುಂದುವರೆದರೆ,ಸರ್ಕಾರ ಅರಣ್ಯ ಇಲಾಖೆಯಲ್ಲಿ ಆಡಳಿತ ಬಿಗಿಗೊಳಿಸದಿದ್ದರೆ ಇಡೀ ಅರಣ್ಯವೇ ಸರ್ವನಾಶ ಆಗುವ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ತನಿಖೆಗೆ ಆದೇಶಿಸಬೇಕು, ತಪ್ಪಿತಸ್ಥರಿಗೆ ಮುಲಾಜಿಲ್ಲದೆ ಶಿಕ್ಷೆ ಆಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
Related Articles
Thank you for your comment. It is awaiting moderation.


Comments (0)