ಹುಲಿಗಳ ಅಸಹಜ ಸಾವು ಪ್ರಕರಣ: ಮೂವರು ಆರೋಪಿಗಳ ಬಂಧನ
- by Suddi Team
- June 28, 2025
- 78 Views

ಚಾಮರಾಜನಗರ: ಮಲೆಮಹದೇಶ್ವರ ವನ್ಯಧಾಮದಲ್ಲಿ ಸಂಭವಿಸಿದ್ದ ಐದು ಹುಲಿಗಳ ಅಸಹಜ ಸಾವಿನ ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದ್ದು, ವಿಚಾರಣೆ ಮುಂದುವರಿಸಲಾಗಿದೆ.
ಹುಲಿಗಳ ಸಾವು ಪ್ರಕರಣದವನ್ನು ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿ ತನಿಖೆ ನಡೆಸುತ್ತಿವೆ. ಕೊಳ್ಳೇಗಾಲ ವಿಜಿಲೆನ್ಸ್ ತಂಡ ಹಾಗೂ ಅರಣ್ಯ ಇಲಾಖೆ ಜಂಟಿಯಾಗಿ ತನಿಖೆಯನ್ನು ತೀವ್ರಗೊಳಿಸಿದ್ದು, ನಿನ್ನೆ ಮೀಣ್ಯಂ, ಗಾಜನೂರು, ಕಳಬಾಯಿ ದೊಡ್ಡಿ, ಕೊಪ್ಪ ಗ್ರಾಮದ ಕೆಲ ಶಂಕಿತರನ್ನು ತಂಡ ವಿಚಾರಣೆ ನಡೆಸಿದಾಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಹಸುವನ್ನು ಹುಲಿ ಕೊಂದಿದ್ದಕ್ಕೆ ಪ್ರತಿಯಾಗಿ ಹುಲಿಗಳನ್ನು ವಿಷಪ್ರಾಶನದಿಂದ ಸಾವಿಗೀಡಾಗುವಂತೆ ಮಾಡಲಾಗಿದೆ ಎಂದು ತಿಳಿದುಬಂದಿದ್ದು, ಘಟನೆ ಸಂಬಂಧ ಮಾದ ಅಲಿಯಾಸ್ ಮಾದುರಾಜು, ನಾಗರಾಜ್ ಮತ್ತು ಕೂನಪ್ಪ ಎನ್ನುವ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತ ಹೆಚ್ಚಿನ ವಿಚಾರಣೆ ಮುಂದುವರಿಸಲಾಗಿದೆ.
ಪ್ರಕರಣದ ತನಿಖಾ ಪ್ರಗತಿ ಕುರಿತು ಮಾಹಿತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತನಿಖೆ ಕೈಗೊಂಡು ಕೆಲವರನ್ನು ಬಂಧಿಸಲಾಗಿದೆ. ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
Related Articles
Thank you for your comment. It is awaiting moderation.
Comments (0)