ಯುವ ಸಮೂಹದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ; ಕಾರಣ ಪತ್ತೆಗೆ ಮುಂದಾದ ಸರ್ಕಾರ

ಬೆಂಗಳೂರು: ಹಾಸನ ಸೇರಿ ರಾಜ್ಯದ ಹಲವು ಕಡೆ ಯುವ ಜನತೆಯಲ್ಲಿ ಹೆಚ್ಚಿನ ಪ್ರಮಾಣದ ಹೃದಯಾಘಾತ ಸಂಭವಿಸಿರುವುದು ಆತಂಕಕಾರಿಯಾಗಿದ್ದು, ಇದಕ್ಕೆ ಕಾರಣ ಪತ್ತೆ ಹೆಚ್ಚಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಯುವಕ ಯುವತಿಯರಲ್ಲೇ ಹೆಚ್ಚಾಗಿ ಹೃದಯಾಘಾತ ಸಂಭವಿಸುತ್ತಿರುವ ಕುರಿತು ವರದಿಯಾಗುತ್ತಿದೆ. ಹಾಸನದಲ್ಲಿ 20ಕ್ಕೂ ಅಧಿಕ ಹೃದಯಾಘಾತ ಪ್ರಕರಣಗಳು ವರದಿಯಾಗಿವೆ. ಯುವ ಸಮೂಹದಲ್ಲಿ ಹೆಚ್ಚಾಗಿ ಹೃದಯಾಘಾತ ಸಂಭವಿಸುತ್ತಿರುವ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದರು.

ಯಾವ ಕಾರಣದಿಂದ ಯುವಕರಲ್ಲಿ ಹೃದಯಾಘಾತ ಹೆಚ್ಚಾಗಿದೆ ಎನ್ನುವುದನ್ನು ಪತ್ತೆ ಹಚ್ಚಿ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗಳ್ಳಲಾಗುತ್ತದೆ. ಹೃದಯಾಘಾತ ಪ್ರಕರಣಗಳ ಕುರಿತು ತನಿಖೆಗೆ ಆದೇಶಿಸುವುದಿಲ್ಲ, ಎಲ್ಲವನ್ನೂ ತನಿಖೆ ನಡೆಸಲಾಗುವುದಿಲ್ಲ. ಆದರೆ, ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.

ಮಹಾರಾಷ್ಟ್ರದಲ್ಲಿ ತ್ರಿಭಾಷಾ ನೀತಿ ಕೈಬಿಟ್ಟು, ದ್ವಿಭಾಷಾ ನೀತಿ ಅಳವಡಿಸಿಕೊಳ್ಳುವ ಆದೇಶ ಮಾಡಲಾಗಿದೆ. ನಮ್ಮ ರಾಜ್ಯದಲ್ಲಿಯೂ ದ್ವಿಭಾಷಾ ನೀತಿ ಜಾರಿಗೆ ಸರ್ಕಾರ ಬದ್ದವಾಗಿದೆ. ನಾವು ದ್ವಿಭಾಷಾ ನೀತಿ ಪರವಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.

Related Articles

Comments (0)

Leave a Comment