ಬುಕ್ಕಾಂಬುಧಿ ಬೆಟ್ಟಕ್ಕೆ ಉಜ್ಜಯಿನಿ ಸಿದ್ದಲಿಂಗ ಜಗದ್ಗುರುಗಳು ಆಗಮಿಸಿದ ಶುಭಾಗಮನ ಶತಮಾನೋತ್ಸವದ ಪೂರ್ವಭಾವಿ ಸಮಾರಂಭ

ರಂಭಾಪುರಿ ಪೀಠ (ಬಾಳೆಹೊನ್ನೂರು): ಅಜ್ಜಂಪುರ ತಾಲೂಕ ಬುಕ್ಕಾಂಬುಧಿ ಬೆಟ್ಟಕ್ಕೆ ಪರಮ ತಪಸ್ವಿ ಲಿಂ.ಶ್ರೀ ಉಜ್ಜಯಿನಿ ಸಿದ್ದಲಿಂಗ ಜಗದ್ಗುರುಗಳವರು ದಯಮಾಡಿಸಿ ಒಂದು ನೂರು ವರ್ಷಗಳಾಗುತ್ತಿರುವ ಸಂದರ್ಭದಲ್ಲಿ ಶುಭಾಗಮನ ಶತಮಾನೋತ್ಸವವನ್ನು 2025 ರನವೆಂಬರ್ 23 ರಂದು ಆಚರಿಸುವ ಸಂಬಂಧವಾಗಿ ಪೂರ್ವಭಾವಿ ಸಮಾಲೋಚನಾ ಸಮಾರಂಭವನ್ನು ಜುಲೈ 8 ಬೆಳಿಗ್ಗೆ 11 ಗಂಟೆಗೆ ಏರ್ಪಡಿಸಲಾಗಿದೆ.

ಬುಕ್ಕಾಂಬುಧಿ ಬೆಟ್ಟದಲ್ಲಿ ಜರುಗುವ ಸಮಾರಂಭದ ಸಾನ್ನಿಧ್ಯವನ್ನು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಹಾಗೂ ಶ್ರೀ ಉಜ್ಜಯಿನಿ ಸಿದ್ದಲಿಂಗ ಜಗದ್ಗುರುಗಳು ವಹಿಸುವರು. ಅ.ಭಾ.ವೀರಶೈವ ಶಿವಾಚಾರ್ಯ ಸಂಸ್ಥೆಯ ಅಧ್ಯಕ್ಷರಾದ ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯರು ಉದ್ಘಾಟಿಸಲಿದ್ದು ಅ.ಭಾ.ವೀ.ಶಿ.ಸಂಸ್ಥೆ ಅಧ್ಯಕ್ಷರಾದ ಮುಕ್ತಿಮಂದಿರ ಕ್ಷೇತ್ರದ ವಿಮಲ ರೇಣುಕ ಮುಕ್ತಿಮುನಿ ಶಿವಾಚಾರ್ಯರು ನೇತೃತ್ವ ವಹಿಸುವರು, ಹುಲಿಕೆರೆ ವಿರೂಪಾಕ್ಷಲಿಂಗ ಶಿವಾಚಾರ್ಯರು, ನಂದೀಪುರಮಠದ ನಂದೀಶ್ವರ ಶಿವಾಚಾರ್ಯರು, ಹುಣಸಘಟ್ಟದ ಗುರುಮೂರ್ತಿ ಶಿವಾಚಾರ್ಯರು, ತಾವರೆಕೆರೆ ಡಾ.ಅಭಿನವ ಸಿದ್ದಲಿಂಗ ಶಿವಾಚಾರ್ಯರು, ಹಣ್ಣೆಮಠದ ಮರುಳಸಿದ್ದ ಪಂಡಿತಾರಾಧ್ಯ ಶಿವಾಚಾರ್ಯರು, ಬೇರುಗಂಡಿಮಠದ ರೇಣುಕ ಮಹಾಂತ ಶಿವಾಚಾರ್ಯರು, ಬೀರೂರು ರುದ್ರಮುನಿ ಶಿವಾಚಾರ್ಯರು, ಕೆ.ಬಿದಿರೆ ಪ್ರಭುಕುಮಾರ ಶಿವಾಚಾರ್ಯರು, ಚಿಕ್ಕಮಗಳೂರು ಚಂದ್ರಶೇಖರ ಶಿವಾಚಾರ್ಯರು ಸಮ್ಮುಖ ವಹಿಸುವರು. ಈ ಸಮಾರಂಭದಲ್ಲಿ ಸರ್ವ ಭಕ್ತಾದಿಗಳು ಪಾಲ್ಗೊಳ್ಳಬೇಕೆಂದು ಬುಕ್ಕಾಂಬುಧಿಯ ಶ್ರೀಮದ್‌ ಉಜ್ಜಯಿನಿ ಜಗದ್ಗುರು ಸಿದ್ದಲಿಂಗ ಶಿವಾಚಾರ್ಯ ಟ್ರಸ್ಟ್ (ರಿ) ಪ್ರಕಟಣೆಯಲ್ಲಿ ತಿಳಿಸಿದೆ.

Related Articles

Comments (0)

Leave a Comment