ರಸಗೊಬ್ಬರ ಪೂರೈಕೆಗಾಗಿ ನಡ್ಡಾಗೆ ಪತ್ರ; ಸಿಎಂ ಸಿದ್ದರಾಮಯ್ಯ
- by Suddi Team
- July 26, 2025
- 68 Views

ನವದೆಹಲಿ: ಅವಧಿಗೂ ಮುನ್ನವೇ ಮುಂಗಾರು ಪ್ರಾರಂಭವಾಗಿರುವ ಹಿನ್ನಲೆಯಲ್ಲಿ ಹೆಚ್ಚುವರಿ ರಸಗೊಬ್ಬರದ ಅಗತ್ಯವಿದ್ದು, ಕೂಡಲೇ ರಸಗೊಬ್ಬರ ಸರಬರಾಜಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿರುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಯೂರಿಯಾ ಮತ್ತಿತರ ರಸಗೊಬ್ಬರಗಳನ್ನು ಎಲ್ಲ ರಾಜ್ಯಗಳಿಗೆ ಸರಬರಾಜು ಮಾಡಬೇಕು. ಈ ವರ್ಷ ಕೇಂದ್ರ ಸರ್ಕಾರವು ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ. ರಾಜ್ಯದಲ್ಲಿ ಅವಧಿಗೂ ಮುನ್ನವೇ ಮುಂಗಾರು ಪ್ರಾರಂಭವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಬಿತ್ತನೆ ಈ ವರ್ಷ ಹೆಚ್ಚಾಗಿದೆ. ಜಲಾನಯನ ಪ್ರದೇಶಕ್ಕೆ ನೀರನ್ನು ಈಗಾಗಲೇ ಹಾಯಿಸಲಾಗಿದೆ. ಹಾಗಾಗಿ ರೈತರು ಹೆಚ್ಚು ರಸಗೊಬ್ಬರವನ್ನು ಬಳಸುತ್ತಿದ್ದಾರೆ ಎಂದು ಜೆಪಿ ನಡ್ಡಾಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.
ನಮ್ಮ ಬಳಿ ರಸಗೊಬ್ಬರವಿಲ್ಲ ಎಂದನೇನಲ್ಲ. ಆದರೆ, ರಾಜ್ಯಕ್ಕೆ ಹೆಚ್ಚಿನ ರಸಗೊಬ್ಬರದ ಅಗತ್ಯವಿದೆ. ಸರ್ಕಾರದ ಬಳಿ ರಸಗೊಬ್ಬರವಿಲ್ಲ ಎಂಬ ತಪ್ಪು ಕಲ್ಪನೆ ರೈತರಲ್ಲಿ ಮೂಡಿದ್ದು, ಚಳವಳಿ ಪ್ರಾರಂಭಿಸಿದ್ದಾರೆ. ಯೂರಿಯಾ ಮತ್ತಿತರ ರಾಸಾಯನಿಕ ರಸಗೊಬ್ಬರ ಲಭ್ಯವಿದ್ದು, ಹೆಚ್ಚಿನ ಗೊಬ್ಬರದ ಅವಶ್ಯಕತೆ ಇದೆ ಎಂದು ಜೆ.ಪಿ. ನಡ್ಡಾ ಅವರಿಗೆ ಮುಖ್ಯಮಂತ್ರಿಗಳು ಪತ್ರ ಬರೆದಿರುವುದಾಗಿ ವಿವರಿಸಿದರು.
ಇನ್ನು ರಾಜ್ಯದಲ್ಲಿ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಸರ್ಕಾರದ ನಿರ್ಧಾರದ ಬಗ್ಗೆ ಸಂಸತ್ತಿನಲ್ಲಿ ಪ್ರಸ್ತಾಪವಾಗಿದ್ದು, ನಿರ್ಧಾರವನ್ನು ಪರಿಪರಿಶೀಲಿಸಬೇಕೆಂದು ಜೆ.ಪಿ. ನಡ್ಡಾ ಅವರ ಕಚೇರಿಯಿಂದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಬಗ್ಗೆ ಮಾತನಾಡಿದ ಸಿಎಂ ಈ ಬಗ್ಗೆ ಮಾಹಿತಿ ಇಲ್ಲ ಎಂದರು.
Related Articles
Thank you for your comment. It is awaiting moderation.
Comments (0)