ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ; ರಮ್ಯಾ ಬೆಂಬಲಕ್ಕೆ ನಿಂತ ದೊಡ್ಮನೆ..!

ಬೆಂಗಳೂರು: ಮೋಹಕ ತಾರೆ ರಮ್ಯಾ ವರ್ಸೆಸ್ ದರ್ಶನ್ ಅಭಿಮಾನಿಗಳ ನಡುವಿನ ಸಂಘರ್ಷಕ್ಕೆ ದೊಡ್ಮನೆ ಪ್ರವೇಶವಾಗಿದ್ದು ರಮ್ಯಾಗೆ ಫುಲ್ ಸಪೋರ್ಟ್ ಮಾಡಿದೆ. ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗವಾಗಿ ನಟ ಶಿವರಾಜ್ ಕುಮಾರ್ ದಂಪತಿ ರಮ್ಯಾ ಪರ ಬೆಂಬಲಕ್ಕೆ ನಿಲ್ಲುವುದಾಗಿ ಪ್ರಕಟಿಸಿದ್ದಾರೆ.

ತಮ್ಮ ವಿರುದ್ಧ ಅವಹೇಳನ,ಬೆದರಿಕೆ ರೂಪದ ಪೋಸ್ಟ್ ಗಳನ್ನು ಮಾಡಿದ್ದ ನಟ ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ಪೊಲೀಸರಿಗೆ ದೂರು ನೀಡಿದ ಬೆನ್ನಲ್ಲೇ ಶಿವರಾಕ್ ಕುಮಾರ್ ಮೂಲಕ‌ ಸ್ಯಾಂಡಲ್ ವುಡ್ ನ ದೊಡ್ಮನೆ ರಮ್ಯಾ ಬೆಂಬಲಕ್ಕೆ ನಿಂತಿದೆ.

ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಶಿವರಾಜ್ ಕುಮಾರ್, ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ. ಯಾವ ಮಹಿಳೆಯ ವಿರುದ್ಧವೂ ಆ ರೀತಿ ಮಾತನಾಡುವುದು ಸರಿಯಲ್ಲ; ಅದನ್ನು ನಾವು ಸಹಿಸಬಾರದು.ಮಹಿಳೆಯರನ್ನು ತಾಯಿಯಾಗಿ, ಅಕ್ಕನಾಗಿ, ಮಗಳಾಗಿ, ಮಡದಿಯಾಗಿ ಮತ್ತು ಮೊಟ್ಟಮೊದಲು ಒಬ್ಬ ವ್ಯಕ್ತಿಯಾಗಿ ಗೌರವಿಸುವುದು ತುಂಬಾ ಮುಖ್ಯ ಎಂದಿದ್ದಾರೆ.

ಸೋಶಿಯಲ್ ಮೀಡಿಯಾ ತುಂಬಾ ಬಲಿಷ್ಠವಾದ ಅಸ್ತ್ರ, ಅದನ್ನು ತಮ್ಮ ಏಳಿಗೆಗಾಗಿ ಬಳಸಬೇಕೇ ಹೊರತು, ಅವಾಚ್ಯ ಶಬ್ದಗಳಿಂದ ನಿಂದಿಸಿ, ದ್ವೇಷ- ಅಸೂಯೆಯನ್ನು ಬಿತ್ತಲು ಬಳಸಬಾರದು.ನಿಮ್ಮ ನಿಲುವು ಸರಿಯಿದೆ, ರಮ್ಯಾ ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ ಎಂದು ಶಿವರಾಜ್‌ಕುಮಾ‌ರ್, ಗೀತಾ ಶಿವರಾಜ್‌ಕುಮಾ‌ರ್ ತಿಳಿಸಿದ್ದಾರೆ.

Related Articles

Comments (0)

Leave a Comment