ರಾಹುಲ್ ಗಾಂಧಿ ಸೂಚನೆ ಪಾಲನೆ:ಮತಗಳ್ಳತನ ಆರೋಪ ಕಾನೂನು ಇಲಾಖೆ ಪರಿಶೀಲನೆಗೆ ವಹಿಸಿದ ಸರ್ಕಾರ
- by Suddi Team
- August 9, 2025
- 157 Views

ಮೈಸೂರು:ಮಹದೇವಪುರ ಕ್ಷೇತ್ರದ ಮತಗಳವು ಪ್ರಕರಣದ ತನಿಖೆ ನಡೆಸುವಂತೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿದ್ದ ಸೂಚನೆಯಂತೆ ರಾಜ್ಯ ಸರ್ಕಾರ ಮೊದಲ ಹೆಜ್ಜೆ ಇಟ್ಟಿದ್ದು,ಕಾನೂನು ಇಲಾಖೆ ಪರಿಶೀಲನೆಗೆ ಸೂಚಿಸಿದೆ.
ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಗಳ್ಳತನದ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ರಾಹುಲ್ ಗಾಂಧಿ ಸೂಚನೆ ನೀಡಿದ್ದು,ಅದರಂತೆ ಆರೋಪ ಪರಿಶೀಲನೆಗೆ ಸೂಚಿಸಿದ್ದೇವೆ, ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ ನಡೆಸಲಿದೆ. ಅವರು ನೀಡುವ ಶಿಫಾರಸಿನ ಅನ್ವಯ ಕಾನೂನಿನ ಕ್ರಮ ಕೈಗೊಳ್ಳುತ್ತೇವೆ ಎಂದರು.
ಪರಿಶೀಲನಾ ಕಾರ್ಯವನ್ನು ತ್ವರಿತವಾಗಿ ನಡೆಸಿ ವರದಿ ನೀಡಲು ಅಡ್ವೊಕೇಟ್ ಜನರಲ್ ಅವರಿಗೆ ಸೂಚನೆ ನೀಡಿದ್ದೇವೆ, ಆದಷ್ಟು ಬೇಗ ಈ ವಿಚಾರದಲ್ಲಿ ಸರ್ಕಾರ ಕಾನೂನಾತ್ಮಕವಾಗಿ ಮುಂದಿನ ಹೆಜ್ಜೆ ಇಡಲಿದೆ ಎಂದರು.
ಮೂರು ಸಾವಿರ ಮತ ಖರೀದಿ ಬಗ್ಗೆ ತಿಳಿದಿಲ್ಲ:
ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರು ಮುಖ್ಯಮಂತ್ರಿಗಳು ಬಾದಾಮಿ ಕ್ಷೇತ್ರದಲ್ಲಿ ಮೂರು ಸಾವಿರ ಮತಗಳನ್ನು ಖರೀದಿ ಮಾಡಿ ಗೆದ್ದದ್ದು ಎಂದು ಹೇಳಿಕೆ ನೀಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ನಾಮಪತ್ರ ಸಲ್ಲಿಸಲು ಮತ್ತು ಪ್ರಚಾರಕ್ಕಾಗಿ ಬಾದಾಮಿಗೆ ಹೋಗಿದ್ದು ಬಿಟ್ಟರೆ ನನಗೆ ಏನೂ ಗೊತ್ತಿಲ್ಲ. ನಾನು 1600 ಮತಗಳಿಂದ ಗೆದ್ದಿದ್ದೆ, ಇಬ್ರಾಹಿಂ ಆರೋಪ ವಿಚಾರ ನನಗೆ ಹೊಸದು, ಈ ಬಗ್ಗೆ ನನಗೆ ಗೊತ್ತಿಲ್ಲ ಎಂದರು.
ಉಪ ಚುನಾವಣೆಯಲ್ಲಿ ಸತ್ತವರೆಲ್ಲಾ ಮತ ಹಾಕಿ ಗೆಲ್ಲಿಸಿದ್ದಾರೆ ಎಂದು ಹಿಂದೆ ಮುಖ್ಯಮಂತ್ರಿಗಳು ಮಾಡಿದ್ದ ಭಾಷಣ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಒಂದು ವೇಳೆ ಸತ್ತವರು ಮತ ಹಾಕಿದ್ದರೆ ಅದಕ್ಕೆ ಯಾರು ಜವಾಬ್ದಾರರು? ಚುನಾವಣಾ ಆಯೋಗ ಇದಕ್ಕೆ ನೇರ ಹೊಣೆಯಲ್ಲವೇ? ಪೀಟರ್ ಚುನಾವಣಾ ವೀಕ್ಷಕರಾಗಿದ್ದರು ಅದಕ್ಕೆ ಸಿದ್ದರಾಮಯ್ಯ ಗೆದ್ದರು ಎಂದು ಬಿಜೆಪಿ ಹೇಳಿತ್ತಿದೆ ಆದರೆ ಅವರಿಲ್ಲದೇ ಹೋಗಿದ್ದರೆ ನನ್ನನ್ನು ಬಿಜೆಪಿಯವರು ಖಂಡಿತ ಸೋಲಿಸುತ್ತಿದ್ದರು ಎಂದರು.
Related Articles
Thank you for your comment. It is awaiting moderation.
Comments (0)