ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ಜೆಡಿಎಸ್ ಜಂಟಿ ಹೋರಾಟ;ವಿಜಯೇಂದ್ರ

ಬೆಂಗಳೂರು: ಸೋಮವಾರದಿಂದ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭಗೊಳ್ಳುತ್ತಿದ್ದು ಉಭಯ ಸದನಗಳಲ್ಲಿಯೂ ಬಿಜೆಪಿ ಹಾಗು ಮಿತ್ರಪಕ್ಷ ಜೆಡಿಎಸ್ ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಜಂಟಿಯಾಗಿ ಹೋರಾಟ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.

ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಬಿಜೆಪಿ ಜೆಡಿಎಸ್ ಸಮನ್ವಯ ಸಮಿತಿ ಸಭೆ ನಂತರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು,ಮುಂಗಾರು ಅಧಿವೇಶನದಲ್ಲಿ ಈ ಸರಕಾರಕ್ಕೆ ಚಾಟಿ ಬೀಸುವ ನಿಟ್ಟಿನಲ್ಲಿ ಯಾವ್ಯಾವ ವಿಚಾರಗಳನ್ನು ಸದನದಲ್ಲಿ ಚರ್ಚಿಸಬೇಕು ಎಂಬ ವಿಷಯವನ್ನು ಚರ್ಚಿಸಿದ್ದೇವೆ.ಸದನ 15- 20 ದಿನ ನಡೆಯಬೇಕಿತ್ತು. 8-9 ದಿನಗಳಿಗೆ ಸೀಮಿತ ಮಾಡಿದ್ದಾರೆ. ಸರಕಾರವು ಕಾಟಾಚಾರಕ್ಕೆ ಅಧಿವೇಶನ ನಡೆಸುತ್ತಿದೆ ಎಂದು ಟೀಕಿಸಿದರು.

ರೈತರ ಸಮಸ್ಯೆಯನ್ನು ವಿಶೇಷವಾಗಿ ತೆಗೆದುಕೊಳ್ಳುತ್ತೇವೆ. ಸಿದ್ದರಾಮಯ್ಯನವರ ಸರಕಾರವು ಉತ್ತರ ಕರ್ನಾಟಕಕ್ಕೆ ಯಾವ ರೀತಿ ಅನ್ಯಾಯ ಮಾಡುತ್ತಿದೆ ಎಂಬ ಕುರಿತು ಚರ್ಚೆ ಮಾಡುತ್ತೇವೆ. ರಾಜ್ಯದಲ್ಲಿ ಜನವಿರೋಧಿ, ಬಡವರ ವಿರೋಧಿ, ರೈತ ವಿರೋಧಿ, ಭ್ರಷ್ಟಾಚಾರಿ ಸರಕಾರ ಇದೆ. ಇಂಥ ಕಾಂಗ್ರೆಸ್ ಸರಕಾರಕ್ಕೆ ಚಾಟಿ ಬೀಸುವ ಕೆಲಸ ಮಾಡಲಿದ್ದೇವೆ. ಇವೆಲ್ಲ ವಿಷಯ ಇಟ್ಟುಕೊಂಡು ಸರಕಾರಕ್ಕೆ ಛೀಮಾರಿ ಹಾಕುತ್ತೇವೆ ಎಂದು ತಿಳಿಸಿದರು.

Related Articles

Comments (0)

Leave a Comment