ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರ;ಸಿಎಂ ಕ್ಷಮೆ ಯಾಚನೆಗೆ ವಿಜಯೇಂದ್ರ ಆಗ್ರಹ

ಮಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ನಿಜಕ್ಕೂ ಪರಮ ಭಕ್ತನಾಗಿದ್ದರೆ ತಡ ಮಾಡದೇ ಪಿತೂರಿ, ಷಡ್ಯಂತ್ರದ ಹಿಂದೆ ಇರುವವರ ಬಗ್ಗೆ ಮಾಹಿತಿ ಬಹಿರಂಗಪಡಿಸಬೇಕು,ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರ ತಡೆಯುವಲ್ಲಿ ವಿಫಲರಾದ ಸಿಎಂ ಸಿದ್ದರಾಮಯ್ಯ ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

ಧರ್ಮಸ್ಥಳದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಎಡಪಂಥೀಯರ ಗುಂಪುಗಳ ಒತ್ತಡಕ್ಕೆ ಮಣಿದು ಎಸ್‍ಐಟಿ ರಚಿಸಿದ್ದಾರೆ ಎಂಬ ಮಾಹಿತಿಯನ್ನು ಸಚಿವ ದಿನೇಶ್ ಗುಂಡೂರಾವ್ ಅವರೇ ಹೇಳಿದ್ದಾರೆ, ಧರ್ಮಸ್ಥಳದ ಬಗ್ಗೆ ಇನ್ನೆಷ್ಟು ಅಪಪ್ರಚಾರ ನಡೆಯಬೇಕು, ಇದೆಲ್ಲವುಗಳ ಕುರಿತು ಸಮಗ್ರ ತನಿಖೆ ನಡೆಯಲಿ. ತನಿಖೆ ಕುರಿತು ಮಧ್ಯಂತರ ವರದಿಯನ್ನು ರಾಜ್ಯ ಸರಕಾರ ಮಂಡಿಸಬೇಕೆಂದು ಸದನದಲ್ಲೂ ಆಗ್ರಹಿಸಿದ್ದೇವೆ ಎಂದರು.

ನಾನೂ ಧರ್ಮಸ್ಥಳ ಮಂಜುನಾಥೇಶ್ವರನ ಪರಮ ಭಕ್ತ ಎಂದು ಡಿ.ಸಿ.ಎಂ ಡಿ.ಕೆ.ಶಿವಕುಮಾರ್ ಅವರು ಮೊನ್ನೆ ಸದನದಲ್ಲೂ ಹೇಳಿದ್ದಾರೆ. ಅವರು ನಿಜಕ್ಕೂ ಪರಮ ಭಕ್ತನಾಗಿದ್ದರೆ ತಡ ಮಾಡದೇ ಪಿತೂರಿ, ಷಡ್ಯಂತ್ರದ ಹಿಂದೆ ಇರುವವರ ಬಗ್ಗೆ ಮಾಹಿತಿ ಬಹಿರಂಗಪಡಿಸಬೇಕು, ನಿಷ್ಪಕ್ಷಪಾತ- ಪಾರದರ್ಶಕ ತನಿಖೆಗೆ ಬಿಜೆಪಿ ಒತ್ತಾಯಿಸಿತ್ತು. ಬಿಜೆಪಿ ರಾಜಕಾರಣ ಮಾಡಿದ್ದರೆ ಇಷ್ಟು ದಿನ ಕಾಯುವ ಅವಶ್ಯಕತೆ ಇರಲಿಲ್ಲ.ಇವತ್ತು ಕೋಟ್ಯಂತರ ಭಕ್ತರು ನೋವಿನಲ್ಲಿದ್ದಾರೆ ಹಾಗಾಗಿ ಷಡ್ಯಂತ್ರ ಎಂದಿರುವ ಉಪ ಮುಖ್ಯಮಂತ್ರಿಗಳು ಆ ಷಡ್ಯಂತ್ರವನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.

ಅಪಪ್ರಚಾರದಿಂದ ನೊಂದಿರುವ ಧರ್ಮಾಧಿಕಾರಿಗಳು:

ತನಿಖೆ ವಿಚಾರದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರದಿಂದ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳು ನೊಂದಿರುವುದು ಗೊತ್ತಾಗುತ್ತದೆ.ಹಿಂದೂ ಧರ್ಮ, ಪರಂಪರೆ, ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಹಾಗೂ ಶ್ರೀ ಕ್ಷೇತ್ರದ ಅಸಂಖ್ಯಾತ ಭಕ್ತರ ಭಾವನೆಗಳಿಗೆ ಧಕ್ಕೆ ಬರಬಾರದು ಎಂಬುದೇ ನಮ್ಮೆಲ್ಲರ ಮೂಲ ಉದ್ದೇಶ ಎಂದು ನುಡಿದರು.

 

Related Articles

Comments (0)

Leave a Comment