ಅನೇಕ ದೇಶಗಳು ಇವಿಎಂ ಬಳಸಿ ಬ್ಯಾಲೆಟ್ ಗೆ ಮರಳಿವೆ; ಸಿಎಂ ಸಿದ್ದರಾಮಯ್ಯ
- by Suddi Team
- September 5, 2025
- 10 Views

ಬೆಂಗಳೂರು:ಅನೇಕ ದೇಶಗಳು ಇವಿಎಂ ಬಳಸಿ ಪುನಃ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡುತ್ತಿದ್ದಾರೆ ಎಂದು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬ್ಯಾಲೆಟ್ ಪೇಪರ್ ಬಳಸುವ ಕುರಿತು ರಾಜ್ಯ ಸಚಿವ ಸಂಪುಟ ಕೈಗೊಂಡ ನಿರ್ಧಾರವನ್ನು ಟೀಕಿಸಿದ ಬಿಜೆಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದೆ ಹಾಗಾಗಿಯೇ ನಾವು ನಮ್ಮಅನುಭವದ ಮೇಲೆ ಮುಂದಿನ ಸ್ಥಳೀಯ ಸಂಸ್ಥೆ ಚುನಾವಣೆಗೆ ಬ್ಯಾಲೆಟ್ ಪೇಪರ್ ಬಳಸುವ ತೀರ್ಮಾನ ಮಾಡಿದ್ದೇವೆ. ಅನೇಕ ದೇಶಗಳು ಇವಿಎಂ ಬಳಸಿ ಪುನಃ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡುತ್ತಿದ್ದಾರೆ ಇದರಲ್ಲಿ ತಪ್ಪೇನಿದೆ,ಪ್ರತಿಪಕ್ಷಗಳ ವಿರೋಧ ಯಾಕೆ? ಎಂದು ಪ್ರಶ್ನಿಸಿದರು.
ಧರ್ಮಸ್ಥಳ ಪ್ರಕರಣವನ್ನು ಎನ್.ಐ. ಎ ಗೆ ವಹಿಸಬೇಕೆಂದು ಸ್ವಾಮೀಜಿಗಳ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ರಾಜ್ಯ ಸರ್ಕಾರ ಎಸ್.ಐ.ಟಿ ರಚನೆ ಮಾಡಿದ್ದು ಅವರೂ ಪೋಲೀಸಿನವರೇ ಎಂದರು.
Related Articles
Thank you for your comment. It is awaiting moderation.
Comments (0)