ಮೇಕೆದಾಟು ಯೋಜನೆಗೆ ತಮಿಳುನಾಡು,ಕೇಂದ್ರ ಸರ್ಕಾರದ ತಕರಾರು ಸಲ್ಲದು; ಸಿಎಂ ಸಿದ್ದರಾಮಯ್ಯ
- September 13, 2025
- 0 Likes
ಮೈಸೂರು: ಹಗಲಿನಲ್ಲಿ ಹಾಲ್ನೊರೆಯಂತೆ ಧುಮ್ಮಿಕ್ಕುವ ಗಗನಚುಕ್ಕಿ ಜಲಪಾತಕ್ಕೆ ರಾತ್ರಿ ವೇಳೆ ಲೇಸರ್ ಲೈಟ್ ಮೆರುಗು ನೀಡಿದ್ದು, ಬಣ್ಣ ಬಣ್ಣದಲ್ಲಿ ಜಲಧಾರೆಯ ಸೌಂದರ್ಯ ಅನಾವರಣಗೊಂಡಿದೆ. ಕನ್ನಡ ಧ್ವಜವನ್ನು ಸಂಕೇತಿಸುವ ಹಳದಿ,ಕೆಂಪು ಸೇರಿ ಬಣ್ಣದ ಲೋಕವೇ ಧರೆಗಿಳಿದಂತೆ ಕಂಗೊಳಿಸುತ್ತಿರುವ ಜಲಪಾತವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕಣ್ತುಂಬಿಕೊಂಡರು.
ಸೆಪ್ಟೆಂಬರ್ 13 ಮತ್ತು 14 ರಂದು ಎರಡು ದಿನಗಳ ಕಾಲ ನಡೆಯುವ ಗಗನಚುಕ್ಕಿ ಜಲಪಾತೋತ್ಸವಕ್ಕೆ ಚಾಲನೆ ಸಿಕ್ಕಿದೆ. ಜಿಲ್ಲಾಡಳಿತ ಮಂಡ್ಯ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಇವರ ವತಿಯಿಂದ ಆಯೋಜಿಸಲಾಗಿದ್ದ ಗಗನ ಚುಕ್ಕಿ ಜಲಪಾತೋತ್ಸವ -2025 ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಜಲಪಾತೋತ್ಸವದ ಅಂಗವಾಗಿ ಮೂಡಿಬಂದ ಲೇಸರ್ ಶೋ ವೀಕ್ಷಿಸಿದರು. ಜಲಧಾರೆಯ ಮೇಲೆ ಮೂಡಿಬಂದ ಬಣ್ಣ ಬಣ್ಣದ ಬೆಳಕಿನ ಚಿತ್ತಾರಕ್ಕೆ ಸಿಎಂ ಮನಸೋತರು.
ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,ಗಗನಚುಕ್ಕಿಯಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಾಗೂ ಪ್ರಕೃತಿ ಸೌಂದರ್ಯವನ್ನು ಜನರು ಕಾಣಲು ಬರಬೇಕು ಎಂಬ ಉದ್ದೇಶದಿಂದ ಸರ್ಕಾರವೇ ಇಲ್ಲಿ ಜಲಪಾತೋತ್ಸವವನ್ನು ಆಚರಿಸುತ್ತಾ ಬಂದಿದೆ. ಕರ್ನಾಟಕದಲ್ಲಿ ಅನೇಕ ನದಿಗಳಿವೆ. ಕಾವೇರಿ, ಕೃಷ್ಣಾ, ತುಂಗಭದ್ರೆ, ಶರಾವತಿ, ನದಿಗಳು ನಮ್ಮ ರಾಜ್ಯದ ಆರ್ಥಿಕತೆ ವೃದ್ಧಿಸಲು ಸಹಕಾರಿಯಾಗಿವೆ. ಗಗನಚುಕ್ಕಿ ಕಾವೇರಿ ನದಿ ಕವಲೊಡೆದು 300 ಅಡಿ ಎತ್ತರದಿಂದ ನೆಲಕ್ಕೆ ಬೀಳುತ್ತದೆ. ಇದು ಅತ್ಯಂತ ಸುಂದರ ಹಾಗೂ ಸೊಗಸಾದ ಪ್ರದೇಶವಾಗಿದ್ದು, ಇದು ಪ್ರಮುಖ ಪ್ರವಾಸೋದ್ಯಮ ಕೇಂದ್ರವಾಗಿದೆ. ಈ ವಾತಾವರಣವನ್ನು ಅನುಭವಿಸಲು ಹೆಚ್ಚು ಜನ ಬರಬೇಕು. ಇದಕ್ಕಾಗಿಯೇ ನಾವು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದ್ದೇವೆ ಎಂದರು.
ಗಗನಚುಕ್ಕಿ ಜಲಪಾತ ಅಭಿವೃದ್ಧಿಗೆ 6 ಕೋಟಿ ವೆಚ್ಚ ಮಾಡಲಾಗಿದೆ. ಜನ ಕೋಟಿ ನೋಡಲು ಆಸನಗಳ ವ್ಯವಸ್ಥೆ ಮಾಡಲಾಗಿದೆ.ಹೆಚ್ಚಿನ ಜನರು ಜಲಪಾತ ವೀಕ್ಷಿಸಲು ಬರಬೇಕು. ಕಳೆದ ಮೂರು ವರ್ಷಗಳಲ್ಲಿ 22 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಭೇಟಿ ನೀಡಿದ್ದಾರೆ ಎಂದರು. ಪ್ರವಾಸಿ ಕೇಂದ್ರಗಳನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ ಎಂದರು.
ಶಿವನಸಮುದ್ರ ಜಲಾಶಯದಲ್ಲಿ 1902 ರಲ್ಲಿ ಏಷ್ಯಾದಲ್ಲಿಯೇ ಮೊದಲ ಬಾರಿಗೆ ವಿದ್ಯುತ್ ಉತ್ಪಾದನೆ ಮಾಡಿದ ಕೇಂದ್ರ ಎಂಬ ಹೆಗ್ಗಳಿಕೆ ನಮ್ಮದು. ರಾಜ್ಯ ಇಂದು ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಿದ್ದರೆ ಅದಕ್ಕೆ ಶಿವನಸಮುದ್ರ ಮೂಲಕ ಕಾರಣ.ಪ್ರಸ್ತುತ ಕರ್ನಾಟಕಕ್ಕೆ ಅಗತ್ಯವಿರುವಷ್ಟು ವಿದ್ಯುತ್ ಉತ್ಪಾದನೆಯಾಗುತ್ತಿದ್ದು, ಅದನ್ನು ಬಳಸಿಕೊಳ್ಳುವ ಕೆಲಸವೂ ಆಗುತ್ತಿದೆ. ವಿದ್ಯುತ್ ಉತ್ಪಾದಿಸಿ ರೈತರಿಗೆ ಉಪಯೋಗವಾಗುವ ಕೆಲಸವಾಗುತ್ತಿದೆ ಎಂದರು.
Comments (0)