ಮರು ಮತ ಎಣಿಕೆಯಲ್ಲೂ ನಂಜೇಗೌಡರೇ ಗೆಲ್ತಾರೆ; ಡಿಕೆ ಶಿವಕುಮಾರ್ ವಿಶ್ವಾಸ

ಬೆಂಗಳೂರು:ಮಾಲೂರು ಶಾಸಕ ನಂಜೇಗೌಡರ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿರಬಹುದು ಆದರೆ ಕೋರ್ಟ್ ನಿರ್ದೇಶನದಂತೆ ಮರು ಮತ ಎಣಿಕೆಯಾದರೂ ನಂಜೇಗೌಡರೇ ಗೆಲ್ಲುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮಾಲೂರು ವಿಧಾನಸಭಾ ಕ್ಷೇತ್ರದ ಮರುಮತ ಎಣಿಕೆ ಕುರಿತು “ನ್ಯಾಯಲಯದ ಮರು ಎಣಿಕೆ ಆದೇಶ ಆಶ್ಚರ್ಯ ತಂದಿದೆ. ಈ ಬಗ್ಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಮರು ಮತ ಎಣಿಕೆ ನಡೆದರು ನಂಜೇಗೌಡ ಅವರು ಮತ್ತೆ ಗೆಲ್ಲುವ ವಿಶ್ವಾಸವಿದೆ” ಎಂದರು.

ನಗರದಲ್ಲಿ ರಸ್ತೆಗುಂಡಿ ಸಮಸ್ಯೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.ಸಮಸ್ಯೆ ಪರಿಹಾರಕ್ಕಾಗಿ ಅಧಿಕಾರಿಗಳಿಗೆ ಟಾಸ್ಕ್ ನೀಡಿದ್ದೇವೆ,”ಗಡುವಿನಲ್ಲಿ ರಸ್ತೆಗುಂಡಿಗಳನ್ನು ಮುಚ್ಚಬೇಕು, ಈ ಬಗ್ಗೆ ಗಡುವಿನ ವೇಳಾಪಟ್ಟಿ ತಯಾರಿಸಿ ನನಗೆ ನೀಡಬೇಕು. ಸಂಚಾರಿ ಪೊಲೀಸ್ ವಿಭಾಗದವರು ಸಹ ರಸ್ತೆಗುಂಡಿಗಳ ಬಗ್ಗೆ ಮಾಹಿತಿ ನೀಡಬೇಕು ಹಾಗೂ ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸೂಚಿಸಿದ್ದೇನೆ” ಎಂದರು.

ನಗರದ ಸ್ವಚ್ಛತೆಗೆ ಸಾಕಷ್ಟು ಆಧ್ಯತೆ ನೀಡಿದ್ದರೂ ಸಾರ್ವಜನಿಕರ ಸಂಪೂರ್ಣ ಸಹಕಾರವಿಲ್ಲದೇ ಇದ್ದರೆ ಗುರಿ ತಲುಪಲಾಗಲ್ಲ,ವಾಹನಗಳಲ್ಲಿ ಕಸ ತಂದು ಎಲ್ಲೆಂದರಲ್ಲಿ ಎಸೆಯಲಾಗುತ್ತಿದೆ.”ರಸ್ತೆ ಬದಿ ಸೇರಿದಂತೆ ನಗರಾದ್ಯಂತ ಎಲ್ಲೆಂದರಲ್ಲಿ ಕಸ ಎಸೆಯುವವರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ತೆಗೆದುಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಇದರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಬೆಂಗಳೂರು ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್ ಹಾಗೂ ಸಂಚಾರಿ ಪೊಲೀಸರೊಟ್ಟಿಗೆ ಚರ್ಚೆ ನಡೆಸಲಾಗಿದೆ” ಎಂದರು.

“ಪಾಲಿಕೆಗಳ ಆಯುಕ್ತರು ಪ್ರತಿದಿನ ಬೆಳಿಗ್ಗೆ ನಗರ ಸಂಚಾರದ ಬಗ್ಗೆ ನನಗೆ ಮಾಹಿತಿ ನೀಡಬೇಕು. ಯಾವುದೇ ಕೆಲಸ ತೆಗೆದುಕೊಂಡರೂ ಗುಣಮಟ್ಟ ಕಾಯ್ದುಕೊಳ್ಳಬೇಕು. ಅಲ್ಲಿಂದ ಇಲ್ಲಿ, ಇಲ್ಲಿಂದ ಅಲ್ಲಿ ಕೆಲಸ ಮಾಡಲಾಗಿದೆ ಎಂದು ಯಾರೂ ಬೋಗಸ್ ಬಿಲ್ ಬರೆಯುವಂತಿಲ್ಲ. ಒಂದೊಮ್ಮೆ ಈ ರೀತಿಯಾದರೆ ಇದಕ್ಕೆಲ್ಲಾ ಅಧಿಕಾರಿಗಳೇ ಹೊಣೆ. ಯಾವುದೇ ಇಂಜಿನಿಯರ್ ಗಳನ್ನು ನಂಬಬೇಡಿ ಎಂದು ಅಧಿಕಾರಿಗಳಿಗೆ ಹೇಳಿದ್ದೇನೆ” ಎಂದರು.

Related Articles

Comments (0)

Leave a Comment