ಮೇಕೆದಾಟು ಯೋಜನೆಗೆ ತಮಿಳುನಾಡು,ಕೇಂದ್ರ ಸರ್ಕಾರದ ತಕರಾರು ಸಲ್ಲದು; ಸಿಎಂ ಸಿದ್ದರಾಮಯ್ಯ
- September 13, 2025
- 0 Likes
ಬೆಂಗಳೂರು: ವೀರಶೈವ ಲಿಂಗಾಯತ ಸಮುದಾಯ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಲ್ಲಿ ಧರ್ಮದ ಕಲಂ ನಲ್ಲಿ ಹಿಂದೂ ಎಂದು ಬರೆಸಬೇಕೋ,ವೀರಶೈವ,ಲಿಂಗಾಯತ ಎಂದು ಬರೆಸಬೇಕೋ ಎನ್ನುವುದನ್ನ ಅವರವರ ವಿವೇಚನೆಗೆ ಬಿಡಲಾಗಿದೆ ಆದರೆ ಪ್ರತ್ಯೇಕ ಧರ್ಮಕ್ಕಾಗಿ ಪ್ರಯತ್ನ ಮುಂದುವರಿಯಲಿದೆ ಎಂದು ಅರಣ್ಯ ಸಚಿವ ಬಿ.ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ವೀರಶೈವ- ಲಿಂಗಾಯತ ಎಂದು ಧರ್ಮದ ಕಾಲಂನಲ್ಲಿ ಬರೆಸಬೇಕು ಎಂಬುದು ಮಹಾಸಭಾ ನಿಲುವಾಗಿದೆ. ಆದರೆ ಪ್ರತ್ಯೇಕ ಧರ್ಮ ಎಂದು ಇನ್ನೂ ಗುರುತಿಸಿಲ್ಲ. ಹೀಗಾಗಿ ಆತ್ಮಸಾಕ್ಷಿಯಂತೆ ಮತ್ತು ವಿವೇಚನೆಗೆ ತಕ್ಕಂತೆ ಬರೆಸುವಂತೆ ಮನವಿ ಮಾಡಲಾಗಿದೆ ಎಂದು ಹೇಳಿದರು.
ವೀರಶೈವ-ಲಿಂಗಾಯತ ಬೇರೆ ಬೇರೆ ಅಲ್ಲ. ಒಂದೇ ಎಂಬುದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನಿಲುವಾಗಿದ್ದು, ಪ್ರತ್ಯೇಕ ಧರ್ಮಕ್ಕಾಗಿ ಪ್ರಯತ್ನ ಮುಂದುವರಿಯಲಿದೆ. ಸಿದ್ದಗಾಂಗಾ ಮಠದ ಲಿಂಗೈಕ್ಯ ಡಾ.ಶಿವಕುಮಾರ್ ಸ್ವಾಮೀಜಿ ಅವರೂ ಕೂಡ ವೀರಶೈವ-ಲಿಂಗಾಯತ ಒಂದೇ ಎಂದು ಪ್ರತಿಪಾದಿಸಿದ್ದರು. ಶುಕ್ರವಾರ ಹುಬ್ಬಳ್ಳಿಯಲ್ಲಿ ಮಠಾಧಿಪತಿಗಳ ಒಕ್ಕೂಟ ಆಯೋಜಿಸಿದ್ದ ಏಕತಾ ಸಮಾವೇಶ ಸಂಪೂರ್ಣ ಯಶಸ್ವಿಯಾಗಿದೆ. ಪಂಚಪೀಠದ ಪೀಠಾಧಿಪತಿಗಳು,ದಿಂಗಾಲೇಶ್ವರ ಮಹಾಸ್ವಾಮೀಜಿ, ಶ್ರೀ ಸಿದ್ದಲಿಂಗ ಸ್ವಾಮೀಜಿ, ಸಾವಿರಾರು ಹರಚರಗುರು ಮೂರ್ತಿಗಳು ಹಾಗೂ ಸಾವಿರಾರು ಸಮಾಜ ಬಾಂಧವರು ಪಾಲ್ಗೊಂಡಿದ್ದರು. ಈ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದು ತಿಳಿಸಿದರು
ರಾಜ್ಯದ ಎಲ್ಲ 7 ಕೋಟಿ ಜನರಿಗೂ ತೃಪ್ತಿಯಾಗುವ ರೀತಿಯಲ್ಲಿ ಸಮೀಕ್ಷೆ ನಡೆಯಲಿದೆ. ಎಲ್ಲ ಜಾತಿ, ಜನಾಂಗದಲ್ಲೂ ಬಡವರಿದ್ದಾರೆ, ನಿರ್ಗತಿಕರಿದ್ದಾರೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಸಿಗಬೇಕು. ಸರ್ಕಾರದ ಯೋಜನೆಯ ಲಾಭ ದೊರಕಬೇಕೆಂಬ ನಿಟ್ಟಿನಲ್ಲಿ ಸರ್ಕಾರ ಶ್ರಮಿಸುತ್ತಿದೆ ಎಂದರು.
Comments (0)