ಬೆಂಗಳೂರು ಮೈಸೂರು ನಡುವೆ ದಸರಾ ವಿಶೇಷ ಬಸ್ ಸೌಲಭ್ಯ; ಸ್ಯಾಟಲೈಟ್ ನಿಲ್ದಾಣದಲ್ಲಿ ಪೂಜೆ ಸಲ್ಲಿಸಿ ಬಸ್ ಸಂಚಾರಕ್ಕೆ ಚಾಲನೆ
- by Suddi Team
- September 25, 2025
- 38 Views

ಬೆಂಗಳೂರು: ನಾಡ ಹಬ್ಬ ಮೈಸೂರು ದಸರಾ ಪ್ರಯುಕ್ತ ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 280 ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಮಾಡಿದ್ದು,ವಾಹನಗಳಿಗೆ ಪೂಜೆ ಸಲ್ಲಿಸುವ ಮುಖೇನ ದಸರಾ ವಿಶೇಷ ಬಸ್ಸುಗಳಿಗೆ ಚಾಲನೆ ನೀಡಲಾಯಿತು.
ಪ್ರಯಾಣಿಕರ ಬೇಡಿಕೆಯಾನುಸಾರ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ಉದ್ದೇಶದಿಂದ ಇಂದು ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಮೈಸೂರು ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ದಸರಾ ವಿಶೇಷ ಕಾರ್ಯಾಚರಣೆ ಚಾಲನೆ ನೀಡಲಾಯಿತು.ಮುಂದಿನ 10 ದಿನಗಳವರೆಗೆ
ಮೈಸೂರು ರಸ್ತೆ ಬಸ್ ನಿಲ್ದಾಣದಲ್ಲಿ ದಸರಾ ಕ್ಯಾಂಪ್ ಇರಲಿದ್ದು, ಬೆಂಗಳೂರು ಕೇಂದ್ರೀಯ ವಿಭಾಗ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ವಿಭಾಗಗಳಿಂದ ಒಟ್ಟು 280 ಹೆಚ್ಚುವರಿ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ.
ಈ ಸಂದರ್ಭದಲ್ಲಿ ಮುಖ್ಯ ಸಂಚಾರ ವ್ಯವಸ್ಥಾಪಕರು (ಕಾರ್ಯಾಚರಣೆ), ಮುಖ್ಯ ಭದ್ರತಾ ಮತ್ತು ಜಾಗ್ರತಾಧಿಕಾರಿ, ಮುಖ್ಯ ಸಂಚಾರ ವ್ಯವಸ್ಥಾಪಕರು (ವಾಣಿಜ್ಯ ) ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಕೆಂಪೇಗೌಡ ಬಸ್ ನಿಲ್ದಾಣ, ವಿಭಾಗೀಯ ನಿಯಂತ್ರಣಾಧಿಕಾರಿ ಬೆಂಗಳೂರು ಕೇಂದ್ರೀಯ ವಿಭಾಗ ಹಾಗೂ ಅಧಿಕಾರಿ ಸಿಬ್ಬಂದಿ ವರ್ಗದವರು ಪೂಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಚಾಲಕ ನಿರ್ವಾಹಕರಿಗೆ ಹಾಗೂ ಪ್ರಯಾಣಿಕರಿಗೆ ಸಿಹಿ ವಿತರಿಸುವ ಮೂಲಕ ಶುಭ ಕೋರಲಾಯಿತು.
ಮೈಸೂರು ದಸರಾ-2025 ಪ್ರಯುಕ್ತ ಕರಾರಸಾ ನಿಗಮದಿಂದ ವಿಶೇಷ ಸಾರಿಗೆ ವ್ಯವಸ್ಥೆ/ವಿಶೇಷ ಪ್ಯಾಕೇಜ್ ಸಾರಿಗೆ ವ್ಯವಸ್ಥೆ:
ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 280 ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಹಾಗೂ ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆ.ಆರ್.ಎಸ್.ಅಣೆಕಟ್ಟು/ಬೃಂದಾವನ, ಶ್ರೀರಂಗಪಟ್ಟಣ. ನಂಜನಗೂಡು ಸೇರಿದಂತೆ ಮಡಿಕೇರಿ. ಮಂಡ್ಯ, ಮಳವಳ್ಳಿ, ಹೆಚ್.ಡಿ.ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್.ನಗರ, ಗುಂಡ್ಲುಪೇಟೆ ಇತ್ಯಾದಿ ಸ್ಥಳಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸಲು 350 ಹೆಚ್ಚುವರಿ ವಾಹನಗಳು ಸೇರಿ ಒಟ್ಟಾರೆ 610 ದಸರಾ ವಿಶೇಷ ವಾಹನಗಳನ್ನು ಕಾರ್ಯಾಚರಿಸಲು ಯೋಜಿಸಲಾಗಿದೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ “ಪ್ರೈ ಬಸ್” (Fly Bus) ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದ.
ಮೈಸೂರಿಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಕರ್ನಾಟಕ ಸಾರಿಗೆ ವಾಹನಗಳಿಂದ ಒಂದು ದಿನದ ವಿಶೇಷ ಪ್ರವಾಸ ಸಾರಿಗೆಗಳ ಕಾರ್ಯಾಚರಣೆ:
ಅ) ಗಿರಿದರ್ಶಿನಿ : ಬಂಡೀಪುರ, ಗೋಪಾಲಸ್ವಾಮಿ ಬೆಟ್ಟ, ಬಿಳಿಗಿರಿರಂಗನ ಬೆಟ್ಟ, ನಂಜನಗೂಡು ಮತ್ತು ಚಾಮುಂಡಿ ಬೆಟ್ಟ (ಪ್ರಯಾಣ ದರ ವಯಸ್ಕರಿಗೆ: ರೂ.450/- ಮತ್ತು ಮಕ್ಕಳಿಗೆ: ರೂ.300/-)
ಆ) ಅಲದರ್ಶಿನಿ : ಗೋಲ್ಡನ್ ಟೆಂಪಲ್ (ಬೈಲಕುಪ್ಪೆ), ದುಬಾರೆ ಅರಣ್ಯ ನಿಸರ್ಗಧಾಮ, ರಾಜಾಸೀಟ್, ಹಾರಂಗಿ ಜಲಾಶಯ ಮತ್ತು ಕೆ.ಆರ್.ಎಸ್. (ಪ್ರಯಾಣ ದರ ವಯಸ್ತರಿಗೆ: ರೂ.500/- ಮತ್ತು ಮಕ್ಕಳಿಗೆ: ರೂ.350/-)
ಇ) ದೇವದರ್ಶಿನಿ: ನಂಜನಗೂಡು, ಬ್ಲಫ್, ಮುಡುಕುತೊರೆ, ತಲಕಾಡು, ಸೋಮನಾಥಮನ, ಶ್ರೀರಂಗಪಟ್ಟಣ (ಪ್ರಯಾಣ ದರ ವಯಸ್ಕರಿಗೆ: ರೂ.330/- ಮತ್ತು ಮಕ್ಕಳಿಗೆ: ರೂ.225/-)
ಈ ಪ್ಯಾಕೇಟ್‌ಗಳನ್ನು ದಿನಾಂಕ27/09/2025 ರಿಂದ 07/10/2025 ಅವಧಿಯಲ್ಲಿ ಕಾರ್ಯಾಚರಿಸಲಾಗುವುದು. ಈ ಮೇಲ್ಕಂಡ ಪ್ಯಾಕೇಜ್ ಸಾರಿಗೆಗಳು ಬೆಳಿಗ್ಗೆ ಮೈಸೂರಿನಿಂದ ಹೊರಟು ಮೇಲ್ಕಂಡ ವಿವಿಧ ಸ್ಥಳಗಳನ್ನು ಸಂದರ್ಶಿಸಿದ ನಂತರ ಸಾಯಂಕಾಲ ಮೈಸೂರಿಗೆ ವಾಪಸ್ಸಾಗುತ್ತವೆ.
ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್ ಸೈಟ್ ಅಥವಾ ಮೊಬೈಲ್ ಮುಖಾಂತರ ಮಾಡಬಹುದಾಗಿದೆ.
-ಮೈಸೂರು ಗ್ರಾಮಾಂತರ ಹಾಗೂ ನಗರ ಬಸ್ ನಿಲ್ದಾಣಗಳಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ಪ್ರವಾಸಿಗರಿಗೆ ಕರಾರಸಾ ನಿಗಮದ ಸಾರಿಗೆ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು “ಮಾಹಿತಿ ಕೇಂದ್ರ” -ವನ್ನು ಪ್ರತ್ಯೇಕವಾಗಿ ತೆರೆಯಲಾಗಿದೆ.
Related Articles
Thank you for your comment. It is awaiting moderation.
Comments (0)