ಉನ್ನತ ಶಿಕ್ಷಣ ಇಲಾಖೆ ಜವಬ್ದಾರಿ ವಹಿಸಿಕೊಂಡ ಜಿಟಿಡಿ!
- by Suddi Team
 - June 22, 2018
 - 170 Views
 
ಬೆಂಗಳೂರು: ನಾನು ಉನ್ನತ ಶಿಕ್ಷಣ ಮಾಡಿಲ್ಲ, ನನಗೆ ಉನ್ನತ ಶಿಕ್ಷಣ ಇಲಾಖೆ ಬೇಡ ಎಂದು ಖಾತೆ ಬದಲಾವಣೆಗೆ ಪಟ್ಟು ಹಿಡಿದಿದ್ದ ಉನ್ನತ ಶಿಕ್ಷಣ ಖಾತೆ ಸಚಿವ ಜಿ.ಟಿ. ದೇವೇಗೌಡ ಇಂದು ಕೊನೆಗೂ ಖಾತೆ ಜವಬ್ದಾರಿಯನ್ನು ವಹಿಸಿಕೊಂಡಿದ್ದಾರೆ.
ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 344 ರಲ್ಲಿ ಕುಟುಂಬ ಸಮೇತ ಬಂದು ಪೂಜೆ ನೆರವೇರಿಸಿ ಅಧಿಕೃತವಾಗಿ ಉನ್ನತ ಶಿಕ್ಷಣ ಇಲಾಖೆ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಪೂಜೆ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಜಿ.ಟಿ.ದೇವೇಗೌಡ, ನಾನು ಗ್ರಾಮೀಣ ಭಾಗದಿಂದ ಬಂದವನು. ಹಾಗಾಗಿ, ಗ್ರಾಮೀಣ ಪ್ರದೇಶದ ಜೊತೆ ಇರುವ ಖಾತೆ ಬೇಕು ಎಂದು ಬಯಸಿದ್ದು ನಿಜ. ಅಲ್ಲದೆ, 8 ನೇ ತರಗತಿ ವ್ಯಾಸಂಗ ಮಾಡಿರುವ ಜಿ.ಟಿ. ದೇವೆಗೌಡರು ಉನ್ನತ ಶಿಕ್ಷಣ ಇಲಾಖೆ ನಿರ್ವಹಿಸುತ್ತಾರಾ? ಎಂದು ಮಾಧ್ಯಮಗಳು ವರದಿ ಮಾಡಿದ್ವು. ಆದರೆ, ನಮ್ಮ ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸ ಕೊಡಿಸಿದ್ದೇನೆ. ರಾಜ್ಯದ ವಿದ್ಯಾರ್ಥಿಗಳ ಉನ್ನತ ವಿಧ್ಯಾಭ್ಯಾಸಕ್ಕೂ ಹೆಚ್ಚಿನ ಗಮನ ನೀಡುತ್ತೇನೆ ಎಂದರು.
ಇಲಾಖೆ ಯಲ್ಲಿ ಸಾಕಷ್ಟು ಬದಲಾವಣೆ ಮಾಡಬೇಕಿದೆ.
ವಿಶ್ವವಿದ್ಯಾಲಯಗಳನ್ನು ನಗರ ಪ್ರದೇಶ ಮಾತ್ರವಲ್ಲದೆ ಗ್ರಾಮೀಣ ಪ್ರದೇಶಕ್ಕೂ ವಿಸ್ತರಿಸಬೇಕಿದೆ. ವೃತ್ತಿಪರ ಶಿಕ್ಷಣ ನೀಡಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಬೇಕು.
ಇನ್ಪೋಸಿಸ್ ಮಾದರಿಯಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡುವಂತಹ ವ್ಯವಸ್ಥೆ ತರಬೇಕಿದೆ ಎಂದು ಹೇಳಿದರು.
Related Articles
                            Thank you for your comment. It is awaiting moderation.
                        
                                        
                    
                    
                
                            
                                            
                                                                                                                                                    
                                                                                                                                                    
                                                                                                                                                    
                                                                                                                                                    
                                                                                                                                                    
                                                                                                                                                    
Comments (0)