ಬಿಜೆಪಿಯ ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷರ ಭೇಟಿಯಾದ ವಿಜಯೇಂದ್ರ

ನವದೆಹಲಿ:ನಿತಿನ್‌ ನಬಿನ್‌ರವರು ಪ್ರಸ್ತುತ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ ಕಾರ್ಯಾಧ್ಯಕ್ಷ ಸ್ಥಾನದ ಮೂಲಕ ನಮ್ಮಂತವರಿಗೆ ಪ್ರೇರಣೆಯ ಶಕ್ತಿಯಾಗಿ ಹೊರ ಹೊಮ್ಮಿದ್ದಾರೆ. ಅವರಿಂದ ಬಿಜೆಪಿ ಸಂಘಟನೆ ಇನ್ನಷ್ಟು ಬಲವೃದ್ಧಿಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.

ಬಿಜೆಪಿ ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡಿರುವ ನಿತಿನ್‌ ನಬಿನ್‌ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನವದೆಹಲಿಯ ಬಿಜೆಪಿ ಕೇಂದ್ರ ಕಛೇರಿಯಲಿ ಇಂದು ಭೇಟಿಯಾಗಿ ಅಭಿನಂದಿಸಿದರು. ನಂತರ ಮಾತನಾಡಿದ ವಿಜಯೇಂದ್ರ, ‘ಯುವ ಸಮೂಹ’ ಸಂಘಟನೆಯ ಬಹುದೊಡ್ಡ ಶಕ್ತಿ, ಈ ನಿಟ್ಟಿನಲ್ಲಿ ಯುವ ಉತ್ಸಾಹಿಗಳನ್ನು ಗುರುತಿಸುವುದು ಭಾರತೀಯ ಜನತಾ ಪಾರ್ಟಿಯ ಆದ್ಯತೆ ಹಾಗೂ ಬದ್ಧತೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷರೂ ಆದ ಕೇಂದ್ರ ಸಚಿವ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ ಹಾಗೂ ಪಕ್ಷದ ಇತರ ವರಿಷ್ಠರು ಯುವ ನಾಯಕ ನಿತಿನ್‌ ನಬಿನ್‌ ಅವರನ್ನು ಕಾರ್ಯಾಧ್ಯಕ್ಷರಾಗಿ ಆಯ್ಕೆ ಮಾಡುವ ಮೂಲಕ ದೇಶದ ಯುವ ಜನರಿಗೆ ಸ್ಫೂರ್ತಿಯ ಸಂದೇಶ ರವಾನಿಸಿದ್ದಾರೆ ಎಂದರು.

ಬಿಜೆಪಿ ಪಕ್ಷದ ಇತಿಹಾಸದಲ್ಲಿ ಅತ್ಯುನ್ನತ ಜವಾಬ್ದಾರಿ ವಹಿಸಿಕೊಂಡ ಯುವ ನಾಯಕ ಎಂಬ ಹೆಗ್ಗಳಿಕೆಗೆ ನಿತಿನ್ ನಬಿನ್‌ ಪಾತ್ರರಾಗಿದ್ದಾರೆ. ಅವರು ನಡೆದು ಬಂದ ಹಾದಿಯಲ್ಲಿ ಪಕ್ಷ ನಿಷ್ಠೆ, ಕ್ರಿಯಾಶೀಲತೆ, ರಾಷ್ಟ್ರಬದ್ಧತೆ ಹಾಗೂ ಸಂಘಟನಾ ಸಾಮರ್ಥ್ಯವನ್ನು ಸಮರ್ಥವಾಗಿ ನಿರೂಪಿಸಿದ್ದಾರೆ, ಸತತ ಐದು ಬಾರಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ಬಿಹಾರದಲ್ಲಿ ಅಪಾರ ಜನಮನ್ನಣೆ ಗಳಿಸಿದ ಜನನಾಯಕನಾಗಿ ಹೊರಹೊಮ್ಮಿದ್ದಾರೆ. ನಿತಿನ್‌ ನಬಿನ್‌ರವರು ಪ್ರಸ್ತುತ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ ಕಾರ್ಯಾಧ್ಯಕ್ಷ ಸ್ಥಾನದ ಮೂಲಕ ನಮ್ಮಂತವರಿಗೆ ಪ್ರೇರಣೆಯ ಶಕ್ತಿಯಾಗಿ ಹೊರ ಹೊಮ್ಮಿದ್ದಾರೆ. ಅವರಿಂದ ಬಿಜೆಪಿ ಸಂಘಟನೆ ಇನ್ನಷ್ಟು ಬಲವೃದ್ಧಿಯಾಗಲಿದೆ ಎಂದರು.

ರಾಷ್ಟ್ರಮಟ್ಟದಲ್ಲಿನ ಬದಲಾವಣೆಯಂತೆ ರಾಜ್ಯ ಬಿಜೆಪಿಯಲ್ಲಿಯೂ ಬದಲಾವಣೆ ಸಾಧ್ಯತೆ ಕುರಿತ ಚರ್ಚೆ ನಡುವೆ ವಿಜಯೇಂದ್ರ ದೆಹಲಿ ಪ್ರವಾಸ ಕುತೂಹಲ ಮೂಡಿಸಿದೆ.ವಿಜಯೇಂದ್ರ ವಿರೋಧಿ ಬಣವೂ ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿ ಸಚಿವರ ಭೇಟಿ ಮಾಡಿ ಸಭೆ ಮಾಡಿತ್ತು ಹಾಗಾಗಿ ವಿಜಯೇಂದ್ರ ಭೇಟಿ ಮಹತ್ವ ಪಡೆದುಕೊಂಡಿದೆ.

Related Articles

Comments (0)

Leave a Comment