- Uncategorized
- Like this post: 0
ಸಾರಿಗೆ ನಿಗಮಗಳ ನೌಕರರಿಗೆ ಹೊಸ ವರ್ಷದ ಗಿಫ್ಟ್:ಅಂತರ್ ನಿಗಮ ವರ್ಗಾವಣೆಗೆ ಅವಕಾಶ
- by Suddi Team
- December 31, 2025
- 7 Views
ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಅಂತರ್ ನಿಗಮ ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಕೆಎಸ್ಆರ್ಟಿಸಿ ಗುಡ್ ನ್ಯೂಸ್ ನೀಡಿದ್ದು, ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ರ ನೌಕರರಿಗೆ ಅಂತರ ನಿಗಮ ವರ್ಗಾವಣೆಗೆ ಅವಕಾಶ ಕಲ್ಪಿಸುವ ಮೂಲಕ ಹೊಸ ವರ್ಷದ ಉಡುಗೊರೆ ನೀಡಿದೆ.
ರಾಜ್ಯದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ,ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ,ವಾಯುವ್ಯ ರಸ್ತೆ ಸಾರಿಗೆ ನಿಗಮ ಹಾಗು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯನ್ನೊಳಗೊಂಡು ನಾಲ್ಕು ರಸ್ತೆ ಸಾರಿಗೆ ನಿಗಮಗಳು ಕಾರ್ಯಾಚರಣೆಯಲ್ಲಿವೆ.ಈ ನಿಗಮಗಳಲ್ಲಿ ಇದೀಗ ಅಂತರ್ ನಿಗಮ ವರ್ಗಾವಣೆಗೆ ಅವಕಾಶ ಕಲ್ಪಿಸಿದ್ದು,ಜನವರಿ 1 ರಿಂದ 31 ರವರೆಗೆ ಆನ್ ಲೈನ್ ಮೂಲಕ ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಈ ಕುರಿತು ಕೆಎಸ್ಆರ್ಟಿಸಿ ಕೇಂದ್ರ ಕಚೇರಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಕರ್ನಾಟಕ ಸರ್ಕಾರವು ಆದೇಶ ಸಂಖ್ಯೆ: ಟಿಡಿ 45 ಟಿಸಿಎಸ್ 2020, ದಿನಾಂಕ:09-03-2021, ಟಿಡಿ 45 ಟಿಸಿಎಸ್ 2020, ದಿನಾಂಕ 23-03-2021 ಹಾಗು ಟಿಡಿ 45 ಟಿಸಿಎಸ್ 2020 ಹಾಗು ದಿನಾಂಕ 18-01-2025 ರ ಅನ್ವಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂ.ಮ.ಸಾ.ನಿಗಮ, ಕ.ಕ.ರ.ಸಾ.ನಿಗಮ ಮತ್ತು ವಾ.ಕ.ರ.ಸಾ.ನಿಗಮಗಳ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ರ ನೌಕರರಿಗೆ ಅಂತರ ನಿಗಮ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ.
ತತ್ಸಂಬಂದ, ಕ.ರಾ.ರ.ಸಾ.ನಿಗಮವು ಸುತ್ತೋಲೆ ಸಂಖ್ಯೆ:1690 ದಿನಾಂಕ 26-03-2021 ಮತ್ತು ಸುತ್ತೋಲೆ ಸಂಖ್ಯೆ: 1736 ದಿನಾಂಕ: 18.06.2025 ರಲ್ಲಿ ವರ್ಗಾವಣೆ ನಿರ್ದೇಶನಗಳನ್ನು ನೀಡಲಾಗಿದ್ದು, 2026ನೇ ಸಾಲಿನ ವರ್ಗಾವಣೆ ಪ್ರಕ್ರಿಯೆ ದಿನಾಂಕ: 01-01-2026ರ ಬೆಳಗ್ಗೆ 11:00 ಗಂಟೆಯಿಂದ ಪ್ರಾರಂಭವಾಗಲಿದ್ದು, ದಿನಾಂಕ 31-01-2026 ರ ಸಂಜೆ 5:30 ರವರೆಗೆ ಆನ್ ಲೈನ್ ಮೂಲಕ www.ksrtc.org/transfer ರಲ್ಲಿ ಸಾಮಾನ್ಯ ವರ್ಗಾವಣೆ, ಪತಿ-ಪತ್ನಿ/ಶೇ.40ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ನೌಕರರು/ತೀವ್ರ ತರಹದ ಅನಾರೋಗ್ಯ (ಹೆಚ್.ಐ.ವಿ. ಹೃದಯರೋಗ, ಕ್ಯಾನ್ಸರ್, ಸ್ಟೈನಲ್ ಕಾರ್ಡ್, ಕಿಡ್ನಿ ವೈಪಲ್ಯ ಹಾಗೂ ಮೆದಳು ಸಂಬಂಧಿಸಿದ ಖಾಯಿಲೆಗಳು) ಹೊಂದಿರುವ ನೌಕರರು ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.ನೌಕರರು ಈ ಸೌಲಭ್ಯದ ಸದುಪಯೋಗವನ್ನು ಪಡೆಯಲು ಸಾರಿಗೆ ನಿಗಮ ತಿಳಿಸಿದೆ.
Related Articles
Thank you for your comment. It is awaiting moderation.


Comments (0)