ಹು.ಧಾ.ಮ.ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನಕ್ಕೆ ಅಶೋಕ ಗುಡಿ ನೇಮಕ

ಧಾರವಾಡ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಮತ್ತು ಶಾಲಾ ಶಿಕ್ಷಣ ಖಾತೆ ಸಚಿವ ಮಧು ಬಂಗಾರಪ್ಪ ಅವರ ಅನುಮೋದನೆಯ ಮೇರೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ನಗರದ ವಕೀಲ ಅಶೋಕ ರೇವಯ್ಯ ಗುಡಿ ಅವರನ್ನು ನೇಮಕ ಮಾಡಲಾಗಿದೆ.

ಈ ಕುರಿತು ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ರಾಜು ಎಚ್.ಎಂ. ನೇಮಕಾತಿ ಆದೇಶ ನೀಡಿದ್ದು, ಎಂದಿನಂತೆ ಕಾಂಗ್ರೆಸ್ ಪಕ್ಷದ ಸಂಘಟನೆ, ಸಬಲೀಕರಣ, ಬಲವರ್ಧನೆ ಕಾರ್ಯದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ರಾಜ್ಯದ ಕಾಂಗ್ರೆಸ್ ಸರಕಾರ ರೂಪಿಸಿರುವ ಪಂಚ ಗ್ಯಾರಂಟಿ ಜನಪರ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಅರಿವು ಮೂಡಿಸುವ ಪ್ರಚಾರದಲ್ಲಿ ತೊಡಗಿಸಿಕೊಳ್ಳುವಂತೆ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Comments (0)

Leave a Comment