ಟಿಕೇಟ್ ರಹಿತ ಪಯಾಣ: 4353 ಪಯಾಣಿಕರಿಂದ‌ 8 ಲಕ್ಷ ದಂಡ ವಸೂಲಿ ಮಾಡಿದ ಕೆಎಸ್ಆರ್ಟಿಸಿ

ಬೆಂಗಳೂರು:2025ರ ವರ್ಷಾಂತ್ಯದ ಮಾಸವಾದ ಡಿಸೆಂಬರ್ ತಿಂಗಳಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣ ಮಾಡಿದ ಪ್ರಯಾಣಿಕರಿಂದ ಸಾರಿಗೆ ನಿಗಮವು 8 ಲಕ್ಷ ರೂ.ಗಳ ದಂಡ ವಸೂಲಿ ಮಾಡಿದೆ.

ಡಿಸೆಂಬರ್-2025ರ ಮಾಹೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 43553 ವಾಹನಗಳನ್ನು ತನಿಖೆಗೊಳಪಡಿಸಿದೆ.ಈ ವೇಳೆ 4207 ಪ್ರಕರಣಗಳನ್ನು ಪತ್ತೆಹಚ್ಚಿದ್ದು ಅದರಲ್ಲಿ 4353 ಟಿಕೇಟ್ ರಹಿತ ಪ್ರಯಾಣಿಕರು ಸಿಕ್ಕಿಬಿದ್ದಿದ್ದಾರೆ ಅವರಿಂದ 8,08,704/-ರೂ ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗಿದೆ ಎಂದು ಕೆಎಸ್ಆರ್ಟಿಸಿ ತಿಳಿಸಿದೆ.

ಇದೇ ವೇಳೆ ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 1,14,500/- ರೂಗಳನ್ನು ಕೂಡ ಬಸ್ ಗಳ ತಪಾಸಣೆ ವೇಳೆ ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ. ಹಾಗೂ ತಪ್ಪಿತಸ್ಥರ ವಿರುದ್ಧ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ ಎಂದು ನಿಗಮ ತಿಳಿಸಿದೆ.

ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೇಟ್/ ಪಾಸ್ ಪಡೆದು ಪ್ರಯಾಣ ಮಾಡುವಂತೆ, ನಿಗಮವು ಪ್ರಯಾಣಿಕರಲ್ಲಿ ಮನವಿ ಮಾಡಿದೆ.

 

Related Articles

Comments (0)

Leave a Comment