ಕೆಎಸ್ಆರ್ಟಿಸಿ:ಅನುಕಂಪದ ಆಧಾರದ ಮೇಲೆ ನೇಮಕಾತಿ ಪತ್ರ ವಿತರಿಸಿದ ರಾಮಲಿಂಗಾರೆಡ್ಡಿ
- by Suddi Team
- January 17, 2026
- 81 Views
ಬೆಂಗಳೂರು: ಕರ್ನಾಟಕ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ಮೃತ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದಡಿಯಲ್ಲಿ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಯಿತು.
ಕೆ ಎಸ್ ಆರ್ ಟಿ ಸಿ ಕೇಂದ್ರ ಕಛೇರಿಯಲ್ಲಿ ಅನುಕಂಪದ ಆಧಾರದ ಮೇಲೆ ನೇಮಕಾತಿ ಹುದ್ದೆ ನಿರೀಕ್ಷೆಯಲ್ಲಿದ್ದ 30 ಮೃತಾವಲಂಬಿತರಿಗೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿರವರು ನೇಮಕಾತಿ ಪತ್ರವನ್ನು ನೀಡಿದರು.
ಅನುಕಂಪದ ಆಧಾರದ ಮೇಲೆ ನೌಕರಿ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳ ಪೈಕಿ ಅರ್ಹತೆಯನುಸಾರ ಹಾಗೂ ಖಾಲಿ ಹುದ್ದೆಗಳ ಲಭ್ಯತೆಗೆ ಅನುಗುಣವಾಗಿ 30 ಮೃತಾವಲಂಬಿತರಿಗೆ ನೇಮಕಾತಿ ಪತ್ರ ನೀಡಲಾಯಿತು.
ಈ ಸಂದರ್ಭದಲ್ಲಿ ರಿಜ್ವಾನ್ ನವಾಬ್, ಉಪಾಧ್ಯಕ್ಷರು , ಅಕ್ರಂ ಪಾಷ ಭಾಆಸೇ, ವ್ಯವಸ್ಥಾಪಕ ನಿರ್ದೇಶಕರು,ಡಾ.ನಂದಿನಿದೇವಿ ಕೆ, ಭಾಆಸೇ, ನಿರ್ದೇಶಕರು (ಸಿ & ಜಾ) ರವರು ಉಪಸ್ಥಿತರಿದ್ದರು.
Related Articles
Thank you for your comment. It is awaiting moderation.


Comments (0)