ಉಚಿತ ಭಾರೀ ವಾಹನ ಚಾಲನಾ ತರಬೇತಿ, ಪರವಾನಗಿ ವಿತರಣೆ: ಎಸ್ಸಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ ಕೆಎಸ್ಆರ್ಟಿಸಿ
- by Suddi Team
- February 4, 2026
- 19 Views
ಬೆಂಗಳೂರು: ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಉಚಿತ ಭಾರೀ ವಾಹನ ಚಾಲನಾ ತರಬೇತಿ ಹಾಗೂ ಪರವಾನಗಿ ವಿತರಣೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮುಂದಾಗಿದ್ದು,ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ PM-AJAY ಯೋಜನೆ ಅಡಿ ನಿಗಮದ ಮಾಲೂರು, ಮಳವಳ್ಳಿ, ಹಾಸನ, ಚಿಕ್ಕಮಗಳೂರು ಹಾಗೂ ಹೊಳಲ್ಕೆರೆ ತರಬೇತಿ ಕೇಂದ್ರಗಳಲ್ಲಿ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಉಚಿತ ಭಾರೀ ವಾಹನ ಚಾಲನಾ ತರಬೇತಿ ಆಯೋಜಿಸಲಾಗಿದ್ದು, 45 ವರ್ಷದ ಒಳಗಿನ ಅಭ್ಯರ್ಥಿಗಳು ಅರದಜಿ ಸಲ್ಲಿಸಬಹುದಾಗಿದೆ. ಉಚಿತ ವಸತಿ ಮತ್ತು ಊಟದ ವ್ಯವಸ್ಥೆಯೊಂದಿಗೆ ಒಂದು ತಿಂಗಳ ತರಬೇತಿ ನೀಡಲಿದೆ.
ಸಾರಿಗೆ ಇಲಾಖೆಯ (RTO) ಸಹಯೋಗದೊಂದಿಗೆ ಉಚಿತ ಪರವಾನಗಿ ನೀಡಲಿದ್ದು,ಅರ್ಹ ಅಭ್ಯರ್ಥಿಗಳು ತಮ್ಮ ಹತ್ತಿರದ ತರಬೇತಿ ಕೇಂದ್ರದಲ್ಲಿ ನೇರವಾಗಿ ಅಥವಾ ksrtcjobs.karnataka.gov.in ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು, ವಿವರ ಭರ್ತಿ ಮಾಡಿದ್ದಲ್ಲಿ, ಈ ಕಛೇರಿಯಿಂದಲೇ ತಮ್ಮನ್ನು ಸಂಪರ್ಕಿಸಲಾಗುವುದು ಎಂದು ಕೆಎಸ್ಆರ್ಟಿಸಿ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ದೂರವಾಣಿಗೆ ಸಂಪರ್ಕಿಸಬಹುದಾಗಿದೆ:
ಮಾಲೂರು:7760994432
ಚಿಕ್ಕಮಗಳೂರು: 9606037746
ಮಳವಳ್ಳಿ: 7760990137
ಹಾಸನ:7760990533
ಹೊಳಲ್ಕೆರೆ: 7019072560
ಅರ್ಹ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕೆಎಸ್ಆರ್ಟಿಸಿ ಎಂಡಿ ಅಕ್ರಂ ಪಾಷಾ ತಿಳಿಸಿದ್ದಾರೆ.
Related Articles
Thank you for your comment. It is awaiting moderation.


Comments (0)