ರೋಣ: ಕ್ರೂಸರ್ ಕ್ಯಾಂಟರ್ ಡಿಕ್ಕಿ,ಮೂವರ ಸಾವು

ಗದಗ: ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಇಂದು (ಫೆಬ್ರವರಿ 5, 2026) ಮುಂಜಾನೆ ಕ್ರೂಸರ್ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮಹಿಳಾ ರೈತರು ಸಾವನ್ನಪ್ಪಿದ ಘಟನೆ ನಡೆದಿದೆ.

ಗಜೇಂದ್ರಗಡದಿಂದ ರೋಣದತ್ತ ತೆರಳುತ್ತಿದ್ದ ಕ್ರೂಸರ್ ವಾಹನಕ್ಕೆ ಎದುರಿನಿಂದ ಬಂದ ಕ್ಯಾಂಟರ್ ಲಾರಿ ಬಲವಾಗಿ ಡಿಕ್ಕಿ ಹೊಡೆದಿದ್ದೇ ಈ ದುರಂತಕ್ಕೆ ಕಾರಣವಾಗಿದೆ ಎನ್ನಲಾಗಿದೆ.ರಾಜ್ಯ ಹೆದ್ದಾರಿ 30ರ ಜಿಗಳೂರು ಕ್ರಾಸ್ ಬಳಿ ನಡೆದ ಈ ಅಪಘಾತದಲ್ಲಿ ಗಜೇಂದ್ರಗಡದ ಶಿವಾಜಿಪೇಟೆಯ ನಿವಾಸಿಗಳಾದ ಸುಜಾತಾ, ಅನ್ನಪೂರ್ಣ ಮತ್ತು ಮರಿಯಂಬು. ಮೃತಪಟ್ಟಿದ್ದಾರೆ. ಇವರೆಲ್ಲಾ ಕೆಲಸಕ್ಕಾಗಿ ರೋಣಕ್ಕೆ ತೆರಳುತ್ತಿದ್ದರು.

ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಅವರನ್ನು ರೋಣದ ಭೀಮಸೇನ ಜೋಶಿ ತಾಲೂಕು ಆಸ್ಪತ್ರೆ ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ಗದಗದ ಜಿಮ್ಸ್ ಆಸ್ಪತ್ರೆಗೆ  ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರೋಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ರೋಹನ್ ಜಗದೀಶ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Comments (0)

Leave a Comment